ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ: ಸೆ.1 ರಂದು ಬೆ.7 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯ

0
1019

ಕಲಬುರಗಿ.ಆಗಸ್ಟ್.31:ಸೆಪ್ಟಂಬರ್ 3 ರಂದು ನಡೆಯಲಿರುವ ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣೆಯ ಬಹಿರಂಗ ಪ್ರಚಾರ ಸೆಪ್ಟಂಬರ್ 1 ರಂದು ಬೆಳಿಗ್ಗೆ 7 ಗಂಟೆಗೆ ಅಂತ್ಯವಾಗಲಿದೆ ಎಂದು ಜಿಲ್ಲಾಧಿಕಾರಿಗಳಾದ ವಿ. ವಿ. ಜ್ಯೋತ್ಸಾö್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚುನಾವಣೆಯನ್ನು ಮುಕ್ತ, ನ್ಯಾಯಸಮುತ ಹಾಗೂ ಶಾಂತಿಯುತವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಚುನಾವಣೆ ಪ್ರಚಾರವು ಮತದಾನ ಪ್ರಾರಂಭವಾಗುವ 48 ಗಂಟೆಗಳ ಮುಂಚೆ ಮುಕ್ತಾಯವಾಗಬೇಕಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಸೆಪ್ಟೆಂಬರ್ 1 ರಂದು ಬೆಳಿಗ್ಗೆ 7 ಗಂಟೆ ನಂತರ ರಾಜಕೀಯ ಪಕ್ಷಗಳು, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಗಳ ಪರವಾಗಿ ಯಾರೇ ಇತರರು ಯಾವುದೇ ವಿಧದಲ್ಲಿ ಬಹಿರಂಗ ಚುನಾವಣಾ ಪ್ರಚಾರವನ್ನು ನಡೆಸತಕ್ಕದ್ದಲ್ಲ ಎಂದು ತಿಳಿಸಿದ್ದಾರೆ.
ಚುನಾವಣಾ ಪ್ರಚಾರಕ್ಕೆ ಆಗಮಿಸಿದ, ಮತದಾರರಲ್ಲದ ಬೆಂಬಲಿಗರು/ರಾಜಕೀಯ ಪಕ್ಷದ ಪದಾಧಿಕಾರಿಗಳು/ಮುಖಂಡರುಗಳು/ಪಕ್ಷದ ಕಾರ್ಯಕರ್ತರು/ಮೆರವಣಿಗೆ ಕಾರ್ಯ ನಿರ್ವಹಿಸುವವರು/ಪ್ರಚಾರ ಕಾರ್ಯ ನಿರ್ವಹಿಸುವವರು ಇತ್ಯಾದಿ ಆ ನಗರ ಸ್ಥಳೀಯ ಸಂಸ್ಥೆಗಳ ವಾರ್ಡಗಳ ವ್ಯಾಪ್ತಿಯಲ್ಲಿ ತಮ್ಮ ವಾಸ್ತವ್ಯ ಮುಂದುವರಿಸಿದ್ದÀಲ್ಲಿ ಚುನಾವಣೆಯ ಮುಕ್ತ ಮತ್ತು ನಿಷ್ಪಕ್ಷ ವಾತಾವರಣಕ್ಕೆ ಧಕ್ಕೆಯುಂಟಾಗುವ ಸಂಭವವಿರುವರಿAದ, ಆಯಾ ನಗರ ಸ್ಥಳೀಯ ಸಂಸ್ಥೆಗಳ ವಾರ್ಡಿನ ಮತದಾರರಲ್ಲದ ಮೇಲೆ ತಿಳಿಸಿದ ವ್ಯಕ್ತಿಗಳು ಆ ನಗರ ಸ್ಥಳೀಯ ಸಂಸ್ಥೆಯ ವಾರ್ಡಿನ ವ್ಯಾಪ್ತಿಯಿಂದ ಹೊರಗೆ ಹೋಗಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು, ಇಲ್ಲದಿದ್ದಲ್ಲಿ ಹೊರಗೆ ಕಳುಹಿಸುವ ಬಗ್ಗೆ ಅಗತ್ಯ ಕ್ರಮ ಜರುಗಿಸಬೇಕು ಎಂದು ಅವರು ಆದೇಶಿಸಿದ್ದಾರೆ.
ಮಹಾನಗರಪಾಲಿಕೆಗಳ ವಾರ್ಡಿನ ವ್ಯಾಪ್ತಿಯಲ್ಲಿರುವ ಕಲ್ಯಾಣ ಮಂಟಪ, ಸಮುದಾಯ ಭವನ ಇತರೆ ಸ್ಥಳಗಳಲ್ಲಿ ಆ ನಗರ ಸ್ಥಳೀಯ ಸಂಸ್ಥೆ ವಾರ್ಡಿನ ವ್ಯಾಪ್ತಿಗೆ ಒಳಪಡುವ ಮೇಲೆ ತಿಳಿಸಿದಂತಹ ವ್ಯಕ್ತಿಗಳು ಇದ್ದಾರೆಯೇ ಎಂಬ ಬಗ್ಗೆ ತಪಾಸಣೆ ಮಾಡುವುದು. ಮಹಾನಗರಪಾಲಿಕೆಗಳ ವಾರ್ಡಿನ ವ್ಯಾಪ್ತಿಯಲ್ಲಿರುವ ಪ್ರವಾಸಿಗರ ವಸತಿ ಗೃಹಗಳಲ್ಲಿ ಮತ್ತು ಪ್ರವಾಸಿ ಮಂದಿರದಲ್ಲಿ ಅಂತಹ ವ್ಯಕ್ತ್ತಿಗಳು ಇದ್ದಾರೆಯೇ ಎಂಬ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸಬೇಕು ಎಂದು ಅವರು ಸೂಚಿಸಿದ್ದಾರೆ.
ಮಹಾನಗರಪಾಲಿಕೆಗಳ ವಾರ್ಡಿನ ವ್ಯಾಪ್ತಿಯಲ್ಲಿ ಅನುಮಾನಾಸ್ಪದ ವಾಹನಗಳು ಹಾಗೂ ಜನರ ಸಂಚಾರದ ಮೇಲೆ ನಿಗಾವಹಿಸುವುದು. ಒಟ್ಟಾರೆ, ಯಾವುದೇ ರೀತಿಯಲ್ಲಿ ನೀತಿ-ಸಂಹಿತೆಯ ಉಲ್ಲಂಘನೆಯಾಗದAತೆ ಕ್ರಮವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here