ನವದೆಹಲಿ, ಸೆ. 05: ಕೇಂದ್ರ ಸರ್ಕಾರ ಇತ್ತೀಚೆಗೆ ತನ್ನ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾದ ಪಿಎಂ ಕಿಸಾನ್ ಯೋಜನೆಯಡಿ 9 ನೇ ಕಂತನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ದೇಶದ ಕೋಟ್ಯಂತರ ರೈತರು ಈ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಈ ಯೋಜನೆಯಡಿ, ರೈತರು ಆರ್ಥಿಕ ಸಹಾಯವನ್ನು ಪಡೆಯುತ್ತಾರೆ. ಅಲ್ಲದೆ, ಕೈಗೆಟುಕುವ ದರದಲ್ಲಿ ಸಾಲ ಸೌಲಭ್ಯ ಕೂಡಾ ಸಿಗಲಿದೆ.
ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಸ್ವಾವಲಂಬಿ ಭಾರತ ಯೋಜನೆಯಡಿ ಲಿಂಕ್ ಮಾಡಲಾಗಿದೆ. ಈ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಲ್ಲಿ, ಸರ್ಕಾರವು ರೈತರಿಗೆ ಕೈಗೆಟಕುವ ದರದಲ್ಲಿ ಸಾಲವನ್ನು ನೀಡುತ್ತಿದೆ.
ಈ ಸಾಲದ ಮೇಲಿನ ಬಡ್ಡಿ ದರ ತೀರ ಕಡಿಮೆ :
ಬೆಳೆಗಳನ್ನು ಬಿತ್ತನೆ ಮಾಡಲು ರೈತರು ಬ್ಯಾಂಕುಗಳಿAದ ಕಡಿಮೆ ಬಡ್ಡಿದರದಲ್ಲಿ ಸಾಲ ಪಡೆಯಬಹುದು. ಈ ಸಾಲವನ್ನು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಮಾತ್ರ ನೀಡಲಾಗುತ್ತದೆ. ಈ ಯೋಜನೆಯಡಿಯಲ್ಲಿ, ಯಾವುದೆ ಗ್ಯಾರಂಟಿ ಇಲ್ಲದೆ, ರೈತರು, 3 ಲಕ್ಷದವರೆಗೆ ಸಾಲವನ್ನು ಪಡೆಯಬಹುದು. 3-5 ಲಕ್ಷ ರೂ.ಗಳ ಅಲ್ಪಾವಧಿ ಸಾಲಗಳನ್ನು ಕೇವಲ 4 ಶೇಕಡಾ ಬಡ್ಡಿದರದಲ್ಲಿ ನೀಡಲಾಗುತ್ತದೆ.
ಸರ್ಕಾರವು ಈ ಸಾಲದ ಮೇಲೆ 2 ಪ್ರತಿಶತದಷ್ಟು ಸಬ್ಸಿಡಿಯನ್ನು ನೀಡುತ್ತದೆ. ಇನ್ನು ಸಮಯಕ್ಕೆ ಸರಿಯಾಗಿ, ಮರುಪಾವತಿ ಮಾಡಿದರೆ, 3 ಶೇಕಡಾ ರಿಯಾಯಿತಿ ನೀಡಲಾಗುತ್ತದೆ. ಈ ರೀತಿಯಾಗಿ, ಈ ಸಾಲದ (ಟoಚಿಟಿ) ಮೇಲೆ ಕೇವಲ 4 ಶೇ ಬಡ್ಡಿ ವಿಧಿಸಲಾಗುತ್ತದೆ. ಆದರೆ ಸಾಲ ಮರುಪಾವತಿಯಲಿ ವಿಳಂಬವಾದರೆ, ಸಾಲದ ಬಡ್ಡಿ ದರವು 7 ಪ್ರತಿಶತದಷ್ಟು ಇರುತ್ತದೆ.
ಕಿಸಾನ್ ಕ್ರೆಡಿಟ್ ಕಾರ್ಡ್ ಮಾಡಿಸುವುದು ಹೇಗೆ ?
- ಕಿಸಾನ್ ಕ್ರೆಡಿಟ್ ಕಾರ್ಡ್ ತಯಾರಿಸಲು, ಮೊದಲು ಗ್ರಾಮ ಲೆಕ್ಕಾಧಿಕಾರಿಯನ್ನು ಭೇಟಿ ಮಾಡಬೇಕು.
- ಈಗ ಅವರಿಂದ ನಿಮ್ಮ ಭೂಮಿಯ ಖಾತೆಯನ್ನು ಪಡೆಯಿರಿ.
- ಇದರ ನಂತರ, ಯಾವುದೇ ಬ್ಯಾಂಕಿಗೆ (ಃಚಿಟಿಞ) ಹೋಗಿ ಮ್ಯಾನೇಜರ್ ಅನ್ನು ಭೇಟಿ ಮಾಡಿ ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್ ಮಾಡಲು ಅರ್ಜಿ ಸಲ್ಲಿಸಿ
- ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ಯಾವುದೇ ಗ್ರಾಮೀಣ ಬ್ಯಾಂಕಿನಿAದ ತಯಾರಿಸಿದರೆ, ಅದರಲ್ಲಿ ಸರ್ಕಾರವು ಪ್ರೋತ್ಸಾಹಧನ ಇತ್ಯಾದಿಗಳನ್ನು ನೀಡುವುದರಿಂದ ರೈತರಿಗೆ ಅನುಕೂಲವಾಗುತ್ತದೆ.
- ಇದಾದ ನಂತರ ಬ್ಯಾಂಕ್ ಮ್ಯಾನೇಜರ್ ನಿಮ್ಮನ್ನು ವಕೀಲರ ಬಳಿಗೆ ಕಳುಹಿಸುತ್ತಾರೆ. ಅಲ್ಲಿ ಅಗತ್ಯ ಮಾಹಿತಿಯನ್ನು ಪಡೆದು ಳ್ಳುತ್ತಾರೆ.
- ಇದರ ನಂತರ ನೀವು ಬ್ಯಾಂಕಿಗೆ ಹೋಗಿ ಒಂದು ಫಾರಂ ಭರ್ತಿ ಮಾಡಬೇಕು.
- ಇದರೊಂದಿಗೆ ಕೆಲವು ಪೇಪರ್ವರ್ಕ್ ಇರುತ್ತದೆ. ಇದನ್ನು ಪೂರ್ಣಗೊಳಿಸಿದ ನಂತರ ನಿಮ್ಮ ಕಿಸಾನ್ ಕ್ರೆಡಿಟ್ ಕಾರ್ಡ್ ಅನ್ನು ರಚಿಸಲಾಗುತ್ತದೆ.
- ಇಲ್ಲಿ ನಿಮಗೆ ಎಷ್ಟು ಸಾಲ ಸಿಗುತ್ತದೆ ಎನ್ನುವುದು ನೀವು ಎಷ್ಟು ಭೂಮಿ ಹೊಂದಿದ್ದೀರಿ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.