ಕಲಬುರಗಿ, ಸೆ. 9: ಕಲಬುರಗಿ ಮಹಾನಗರಪಾಲಿಕೆಯಲ್ಲಿ ಅತಂತ್ರ ಸ್ಥಿತಿಯ ಹಿನ್ನೆಲೆಯಲ್ಲಿ ಎಲ್ಲ ರೀತಿಯ ತಂತ್ರಗಾರಿಕೆಯಿAದ ಭಾರತೀಯ ಜನತಾ ಪಕ್ಷ ಅಧಿಕಾರ ಹಿಡಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಹೇಳಿದ್ದಾರೆ.
ಅವರಿಂದ ಕಲಬುರಗಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತ, ಮೊದಲ ಬಾರಿಗೆ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, ಅಭಿವೃದ್ಧಿಯ ದೃಷ್ಟಿಯಿಂದ ಭಾರತೀಯ ಜನತಾ ಪಕ್ಷ ಅಧಿಕಾರ ನಡೆಸಲಿದ್ದು, ಜೆಡಿಎಸ್‌ನವರು ಖಂಡಿತವಾಗಿಯೂ ನಮಗೆ ಬೆಂಬಲಿಸುವ ವಿಶ್ವಾಸ ವ್ಯಕ್ತಪಡಿಸಿದರು.