ಕಲಬುರಗಿ, ಅ. 4: ಎರಡು ಬೈಕ್‌ಗಳ ಮಧ್ಯ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಚಾರಿ ಠಾಣೆಯ ಎ.ಎಸ್.ಐ. ಅವರ ಪುತ್ರ ಸಾವಿಗೀಡಾದ ಘಟನೆ ನಿನ್ನೆ ತಡ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ.
ಕಲಬುರಗಿಯ ಕುಸನೂರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದ ಈ ಘಟನೆಯಲ್ಲಿ ಸಂಚಾರಿ ಠಾಣೆಯ ಪಿಎಸ್‌ಐ ಶ್ರೀಮಂತ ಮಗ ಸುನೀಲ್ ಎಂಬ 28 ವರ್ಷದ ಯುವಕ ಸಾವನ್ನಪ್ಪಿದ್ದಾನೆ.
ನಗರದಿಂದ ಕುಸನೂರ ರಸ್ತೆಯಲ್ಲಿರುವ ಮನೆಗೆ ತೆರಳುತ್ತಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ.
ಈ ಕುರಿತು ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.