ಕಲಬುರಗಿ, ಅ. ೩೦: ಕಲಬುರಗಿ ಜಿಲ್ಲೆಗೆ ನೂತನ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಶ್ರೀಮತಿ ಇಶಾ ಪಂತ ಅವರನ್ನು ವರ್ಗಾವಣೆ ಮಾಡಲಾಗಿದೆ.
೨೦೧೧ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾದ ಶ್ರೀಮತಿ ಇಶಾ ಪಂತ ಅವರು ಬೆಂಗಳೂರಿನ ಕಮಾಂಡ್ ಸೆಂಟರ್ನ ಉಪ ಪೋಲಿಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು.
ಪ್ರಸ್ತುತ ಕಲಬುರಗಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ವೆಸ್. ಡಾ. ಸಿಮಿ ಜಾರ್ಜ ಅವರನ್ನು ಮೈಸೂರು, ಕರ್ನಾಟಕ ಪೊಲೀಸ್ ಅಕಾಡೆಮಿಯ ಉಪ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಈ ವರ್ಗಾವಣೆ ಮಾಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ನಾಗಪ್ಪ ಎಸ್. ಪರೀಟ್ ಅವರು ತಿಳಿಸಿದ್ದಾರೆ.