ಕಲಬುರಗಿ, ನ. 17: ಕಬ್ಬಿಗೆ ಸೂಕ್ತವಾದ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ರೈತರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗೆದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕಬ್ಬಿಗೆ ಪ್ರತಿ ಟನ್ ಕಬ್ಬಿಗೆ 2800 ರೂಪಾಯಿ ದರ ನಿಗದಿ ಹಾಗೂ ನವೆಂಬರ್ 15 ರ ಒಳಗೆ ಕಬ್ಬು ಬೆಳೆಗಾರರ ಹಾಗು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆಯುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘ ಗಡುವು ನೀಡಿತ್ತು.
ರೈತರ ಗಡುವಿಗೆ ಜಿಲ್ಲಾಧಿಕಾರಿಗಳು ಕ್ಯಾರೆ ಅನ್ನದ ಹಿನ್ನಲೆಯಲ್ಲಿ ಇಂದು ಡಿಸಿ ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು.
ಮುತ್ತಿಗೆಯನ್ನು ಪೊಲೀಸರು ತಡೆದ ಹಿನ್ನಲೆಯಲ್ಲಿ ಸ್ಥಳದಲ್ಲೆ ಪ್ರತಿಭಟನೆ ಮುಂದುವರಿಸಿದ್ದ ಈ ವೇಳೆ ಪಟ್ಟು ಹಿಡಿದು ಕುಳಿತ ಪ್ರತಿಭಟನಾನಿರತ ರೈತರನ್ನ ಪೊಲೀಸರು ಬಂಧಿಸಿದ್ದಾರೆ.
ಪೋಲಿಸರು ಬಂಧಿಸಿದ ಕ್ರಮವನ್ನು ಖಂಡಿಸಿ ಡಿಸಿ ನಡೆಗೆ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.