ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್

0
1186

ಕಲಬುರಗಿ, ನ. 21: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸದೊಂದು ಕಂದಕಕ್ಕೆ ಉರುಳಿಬಿದ್ದ ಘಟನೆ ತಾಲೂಕಿನ ಶರಣಸಿರಸಗಿ ಗ್ರಾಮದ ಬಳಿ ನಡೆದಿದೆ.
ಇಂದು ಮುಂಜಾನೆ ಕಲಬುರಗಿಯಿಂದ ಅಫಜಲಪೂರ ಕಡೆಗೆ ಹೊರಟಿದ್ದ ಈ ಬಸ್ ಮೀತಿ ಮೀರಿದ ವೇಗದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್ ಚಾಲಕ ಸೇರಿದಂತೆ ಇಬ್ಬರು ಪ್ರಯಾಣಿಕರಿಗೆ ಮಾತ್ರ ಗಾಯಗಳಾಗಿದ್ದು, ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಕುರಿತಂತೆ ಕಲಬುರಗಿ ಸಂಚಾರಿ 2 ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here