ಕಲಬುರಗಿಯಲ್ಲಿ ಜನೆವರಿ 3ರಂದು ಪತ್ರಕರ್ತರ ಸಂಘದ ಸರ್ವಸದಸ್ಯರ ಮಹಾಸಭೆ

0
1066

ಕಲಬುರಗಿ, ಡಿ. 10: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2020-21ನೇ ಸಾಲಿನ ಸರ್ವ ಸದಸ್ಯರ ಮಹಾಸಭೆ 2022ರ ಜನವರಿ 3ರಂದು ಕಲಬುರಗಿ ನಗರದ ಪೂಜ್ಯ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ನಡೆಯಲಿದೆ.
ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕೆಯುಡ್ಲೂö್ಯಜೆ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸರ್ವಸದಸ್ಯರ ಮಹಾಸಭೆಯಲ್ಲಿ ತಪ್ಪದೇ ಎಲ್ಲ ಸದಸ್ಯರು ಭಾಗವಹಿಬೇಕೆಂದು ಪತ್ರತರ್ಕರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಜಿ. ಲೋಕೇಶ ಅವರು ತಿಳಿಸಿದ್ದಾರೆ.
ಸರ್ವಸದಸ್ಯರ ಸಭೆಯಲ್ಲಿ ವಿಷಯ ಸೂಚಿಯಾಗಿ ಮೊದಲಿಗೆ ಸ್ವಾಗತ, ಹಿಂದಿನ ಸಭೆಯ ನಡಾವಳಿಯನ್ನು ಓದಿ ಅನುಮೋದಿಸುವುದು, 2020-21ನೇ ಸಾಲಿನ ವಾರ್ಷಿಕ ವರದಿ ಮಂಡನೆ ಹಾಗೂ ಅನುಮೋದನೆ, 2020-21ನೇ ಸಾಲಿನ ಲೆಕ್ಕ ಪರಿಶೋಧನಾ ವರದಿ ಮಂಡನೆ ಹಾಗೂ ಅನುಮೋದನೆ, ಸಂಘದ ಚುನಾವಣೆ ನಡೆಸುವ ಕುರಿತು ಅಲ್ಲದೇ ಅಧ್ಯಕ್ಷರ ಅಪ್ಪಣೆ ಮೇರೆಗೆ ಇತರೆ ವಿಷಯಗಳನ್ನು ಚರ್ಚಿಸುವುದಾಗಿರುತ್ತದೆ.

LEAVE A REPLY

Please enter your comment!
Please enter your name here