

ಕಲಬುರಗಿ,ಡಿ.10:ಗುಲಬರ್ಗಾ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಡಿ.14 ರಂದು ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಭಾಸ್ಕರ ಹಾಲ್‌ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿ.ವಿ. ಸುತ್ತಮುತ್ತ ಅಂದು ಸಿ.ಆರ್.ಪಿ.ಸಿ ಕಾಯ್ದೆ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.
ಇದಲ್ಲದೆ ಮತ ಎಣಿಕೆ ಕೇಂದ್ರದ ಒಳಗಡೆ ಇಂಕ್ ಪೆನ್ / ಸ್ಕೆಚ್ ಪೆನ್, ಹರಿತವಾದ ಆಯುಧ, ಸ್ಫೋಟಕ ವಸ್ತುಗಳು, ಮೋಬೈಲ್, ಸಿಗರೇಟು, ಗುಟಕಾ ಹಾಗೂ ನೀರಿನ ಬಾಟಲ್‌ಗಳನ್ನು ತರುವುದನ್ನು ಸಹ ನಿಷೇಧಿಸಿ ಆದೇಶಿಸಲಾಗಿದೆ.