ಒಮಿಕ್ರಾನ್ ನಿಯಂತ್ರಣ ಹಿನ್ನೆಲೆ: ಜಿಲ್ಲೆಯಾದ್ಯಂತ ಇಂದಿನಿoದ ರಾತ್ರಿ ಕಫ್ರ‍್ಯೂ ಜಾರಿ

0
580

ಕಲಬುರಗಿ,ಡಿ.28:ಕೋವಿಡ್ ರೂಪಾಂತರಿ ಓಮಿಕ್ರಾನ್ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟಲು ಮಂಜಾಗೃತವಾಗಿ ಕಲಬುರಗಿ ಜಿಲ್ಲೆಯಾದ್ಯಂತ ಡಿಸೆಂಬರ್ 28 ರಿಂದ 2022ರ ಜನವರಿ 7 ರವರೆಗೆ ಪ್ರತಿದಿನ ರಾತ್ರಿ 10 ಗಂಟೆಯಿAದ ಬೆಳಿಗ್ಗೆ 5 ಗಂಟೆಯವರೆಗೆ ಸಿ.ಆರ್.ಪಿ.ಸಿ. ಕಾಯ್ದೆ 1973ರ ಕಲಂ 144 ರನ್ವಯ ರಾತ್ರಿ ಕಫ್ರ‍್ಯೂ ಜಾರಿಗೊಳಿಸಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ದಿಲೀಷ ಶಶಿ ಅವರು ಆದೇಶ ಹೊರಡಿಸಿದ್ದಾರೆ.
ನೈಟ್ ಕಫ್ರ‍್ಯೂ ಅವಧಿಯಲ್ಲಿ ಪ್ರತಿನಿತ್ಯ ರಾತ್ರಿ 10 ಗಂಟೆಯಿAದ ಬೆಳಿಗ್ಗೆ 5 ಗಂಟೆಯವರೆಗೆ ವೈಯಕ್ತಿಕವಾಗಿ ಅತ್ಯಾವಶ್ಯಕ ಚಟುವಟಿಕೆಗಳಿಗೆ ಹೊರತುಪಡಿಸಿ ಸಂಚಾರ ಮಾಡುವುದನ್ನು ನಿಷೇಧಿಸಲಾಗಿದೆ.
ಇನ್ನು ಡಿಸೆಂಬರ್ 30 ರಿಂದ 2022ರ ಜನವರಿ 2 ರವರೆಗೆ ರೆಸ್ಟಾರೆಂಟ್, ಹೋಟೆಲ್, ಕ್ಲಬ್, ಪಬ್‌ಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಕುಳಿತುಕೊಳ್ಳುವ ಆಸನದ ಸಾಮಥ್ರ‍್ಯದ ಶೇ. 50ರಷ್ಟು ಮಾತ್ರ ಜನರಿಗೆ ಪ್ರವೇಶಕ್ಕೆ ಅನುಮತಿಸಲಾಗಿದೆ. ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ಲಸಿಕೆ ಎರಡು ಡೋಸ್ ಪಡೆದಿರಬೇಕು. ಅಲ್ಲದೇ ಈ ಸ್ಥಳಗಳಲ್ಲಿ ಪ್ರವೇಶ ದ್ವಾರದಲ್ಲಿ ಕೋವಿಡ್ ಲಸಿಕೆ ಎರಡು ಡೋಸ್ ಪಡೆದಿರುವ ಪ್ರಮಾಣ ಪತ್ರ ಮತ್ತು ಕೋವಿಡ್-19 ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿ ಇರುವುದರ ಬಗ್ಗೆ ಪರಿಶೀಲಿಸಿ ಖಾತ್ರಿ ಪಡಿಸಿಕೊಂಡ ನಂತರವೇ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ರೋಗಿಗಳು ಹಾಗೂ ಅವರ ಸಹಾಯಕರಿಗೆ ತುರ್ತು ಸಂದರ್ಭದಲ್ಲಿ ರಾತ್ರಿ ವೇಳೆಯಲ್ಲಿ ಸಂಚರಿಸಲು ಅನುಮತಿಸಿದೆ. ಎಲ್ಲಾ ಕೈಗಾರಿಕಾ ಕಂಪನಿಗಳಲ್ಲಿ ರಾತ್ರಿ ಪಾಳೆಯಲ್ಲಿ ಕೆಲಸ ನಿರ್ವಹಿಸುವ ನೌಕರರು, ನೌಕರರು, ಟೆಲಿಕಾಂ ಸಂಸ್ಥೆಯ ವಾಹನಗಳು, ಇಂಟರ್‌ನೆಟ್ ಸೇವೆ ಒದಗಿಸುವ ನೌಕರರು, ತುರ್ತು ಸೇವೆ ಒದಗಿಸುವ ಐ.ಟಿ.ಕಂಪನಿಯ ನೌಕರರಿಗೆ ರಾತ್ರಿ ವೇಳೆಯಲ್ಲಿ ಸಂಸ್ಥೆಯ ಗುರುತಿನ ಚೀಟಿಯೊಂದಿಗೆ ಸಂಚರಿಸಿ ಕೆಲಸಕ್ಕೆ ಹೋಗಲು ಅನುಮತಿಸಿದೆ.
ಆರೋಗ್ಯ ಮತ್ತು ತುರ್ತು ಸೇವೆ ಒದಗಿಸುವ ಔಷಧ ಅಂಗಡಿಗಳು, ಆರೋಗ್ಯ ಕೇಂದ್ರಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸಬೇಕು ಹಾಗೂ ಇತರೆ ಔದ್ಯಮಿಕ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
ಸರಕು ಸಾಗಾಣಿಕೆಗಳಿಂದ ತುಂಬಿರುವ ವಾಹನಗಳು, ಹೋಮ್ ಡಿಲೇವರಿ, ಮಾಡುವ ವಾಹನಗಳು, ಇ-ಕಾಮರ್ಸ್ ಕಂಪನಿಯ ವಾಹನಗಳು ಸಂಚರಿಸಲು ಅನುಮತಿಸಿದೆ.
ಬಸ್, ರೈಲು ಹಾಗೂ ವಾಯು ಸಂಚಾರದ ಮೂಲಕ ಆಗಮಿಸಿದ ಪ್ರಯಾಣಿಕರನ್ನು ನಿಲ್ದಾಣದಿಂದ ಅವರನ್ನು ಕರೆದೊಯ್ಯಲು ಬರುವ ವೈಯಕ್ತಿಕ, ಆಟೋ ಹಾಗೂ ಟ್ಯಾಕ್ಸಿ ಸಂಚಾರಕ್ಕೆ ಅನುಮತಿಸಿದೆ. ಪ್ರಯಾಣಿಕರು ಪ್ರಯಾಣದ ಟಿಕೇಟ್ ಕಡ್ಡಾಯವಾಗಿ ಹೊಂದಿರಬೇಕು.
ಸಭೆ-ಸಮಾರAಭಕ್ಕೆ 300 ಜನ ಸೀಮಿತ: ಡಿಸೆಂಬರ್ 28 ರಿಂದ ಜಿಲ್ಲೆಯಾದ್ಯಂತ ನಡೆಯುವ ಎಲ್ಲಾ ಸಭೆ, ಸಮಾರಂಭ, ಸಮ್ಮೇಳನ ಇತ್ಯಾದಿಗಳಲ್ಲಿ ಭಾಗವಹಿಸುವವರ ಸಂಖ್ಯೆ 300 ಜನರಿಗೆ ಮಾತ್ರ ಸೀಮಿತಗೊಳಿಸಲಾಗಿದ್ದು, ಕೋವಿಡ್-19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಜವಾಬ್ದಾರಿ ಆಯಾ ಸಂಘಟಕರ / ವ್ಯವಸ್ಥಾಪಕರದ್ದಾಗಿದೆ.
ರಾಜ್ಯ ಮತ್ತು ಕೇಂದ್ರ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಆಗಾಗ ನೀಡುವ ಮಾರ್ಗಸೂಚಿಯನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ನಿಯಮ 51 ರಿಂದ 60 ರನ್ವಯ ಮತ್ತು ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಡಾ.ದಿಲೀಷ್ ಶಶಿ ಅವರು ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here