ಅಫಜಲಪುರ, ಮಾ. 11: ತಾಲೂಕಿನ ಸುಪ್ರಸಿದ್ಧ ದೇವಲ ಗಾಣಗಾಪುರದ ದತ್ತಾತ್ರೇಯ ಮಹಾರಾಜರ ದರ್ಶನಕ್ಕೆ ಆಗಮಿಸಿದ ಮಹಾರಾಷ್ಟ್ರ ರಾಜ್ಯದ ಅಹ್ಮದ್ ನಗರದ ನಿವಾಸಿಗಳು ಎಂದು ಹೇಳಲಾಗುತ್ತಿರುವ 5 ಜನರು ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ದುರ್ಘಟನೆ ಶುಕ್ರವಾರ ಮದ್ಯಾಹ್ನ ಮೂರು ಗಂಟೆ ಸುಮಾರಿಗೆ ಈ ಘಟನೆ ತಾಲೂಕಿನ ಬಳೂರ್ಗಿ ಗ್ರಾಮದ ಸಮೀಪ ನಡೆದಿದೆ.
ದತ್ತನ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದು ಮರಳಿ ಮಹಾರಾಷ್ಟ್ರ ಕಡೆ ಹೊರಟಿದ್ದ ಕಾರು ಏಕಾಏಕಿ ನಿದ್ರೆ ಮಂಪರಿನಲ್ಲಿದ್ದ ಚಾಲಕ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು 4 ಜನ ಹೆಣ್ಣು ಮಕ್ಕಳು ಹಾಗೂ ಓರ್ವ ಚಾಲಕ ಸೇರಿ 5 ಜನ ಮೃತಪಟ್ಟಿದ್ದು ಘಟನೆಯಲ್ಲಿ ಮಕ್ಕಳು ಸೇರಿ ಮೂರು ಜನರಿಗೆ ಗಂಭೀರ ಗಾಯವಾಗಿವೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಇಬ್ಬರ ಸ್ಥಿತಿ ಚಿಂತಾಜ ನಕವಾಗಿದೆ.
ಆದರೆ ಸದ್ಯ ಮೃತರ ಗುರುತು ಪತ್ತೆಯಾಗಿಲ್ಲ ಸ್ಥಳಕ್ಕೆ ಅಫಜಲಪುರ ಸಿಪಿಐ ಜಗದೇವಪ್ಪ ಪಾಳಾ, ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.