ಮಾರ್ಚ್ 28ರಿಂದ ಹತ್ತನೇ ವಾರ್ಷಿಕ ಪರೀಕ್ಷೆ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

0
805

ಕಲಬುರಗಿ,ಮಾ.25:ಕಲಬುರಗಿ ಜಿಲ್ಲೆಯಾದ್ಯಂತ 2022ರ ಮಾರ್ಚ್ 28 ರಿಂದ ಏಪ್ರಿಲ್ 11ರವರೆಗೆ ಕಲಬುರಗಿ ನಗರದ 53 ಹಾಗೂ ಇತರೆ ತಾಲೂಕು ಕೇಂದ್ರಗಳ 120 ಪರೀಕ್ಷಾ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಒಟ್ಟು 173 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷೆಯನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯಲ್ಲಿನ ಎಲ್ಲಾ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ ಹಾಗೂ ಈ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದು ಪ್ರಭಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಭೀಮಾಶಂಕರ ಜಿ. ತೆಗ್ಗಳ್ಳಿ ಅವರು 1973ರ ಸಿಆರ್.ಪಿ.ಸಿ. ಕಲಂ 144ರ ಅನ್ವಯ ಶುಕ್ರವಾರ ಈ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ-35(ಸಿ)ರ ಅನ್ವಯ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರದ ಉಪಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು, ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಬೇರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮೊಬೈಲ್ ಫೋನ್, ಪೇಜರ್, ಬ್ಲೂö್ಯಟೂತ್ ಹಾಗೂ ವೈರಲೆಸ್ ಸೆಟ್‌ಗಳು ಹಾಗೂ ಮತ್ತಿತರ ಎಲೆಕ್ಟಾçನಿಕ್ಸ್ ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಇದಲ್ಲದೇ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿನ ಎಲ್ಲಾ ಜಿರಾಕ್ಸ್ ಮತ್ತು ಪುಸ್ತಕ ಅಂಗಡಿ ಮುಂತಾದವನ್ನು ಮುಚ್ಚುವಂತೆಯೂ ಪ್ರಭಾರ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here