ಕಲಬುರಗಿ,ಏ.5: ಗುತ್ತಿಗೆ ದಾರರಿಂದ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಇಬ್ಬರು ಭ್ರಷ್ಟ ಶಿಕ್ಷಣಾಧಿಕಾರಿಗಳು ಭ್ರಷ್ಟಾಚಾರ ನಿಗ್ರಹದಳದ ಬಲೆಗೆ ಬಿದ್ದಿದ್ದಾರೆ. ಲಂಚ ಪಡೆಯುವಾಗ ಕಾರ್ಯಾ ಚರಣೆ ಕೈಗೊಂಡ ಎಸಿಬಿ ಅಧಿಕಾರಿ ಗಳು ಇಬ್ಬರು ಭ್ರಷ್ಟ ಅಧಿಕಾರಿಗಳನ್ನು ಬಂಧಿಸಿದ್ದಾರೆ.
ಬAಧಿತರನ್ನು ಚಿತ್ತಾಪುರ ತಾಲ್ಲೂಕಿನ ದೈಹಿಕ ಶಿಕ್ಷಣಾಧಿಕಾರಿ ಶ್ರೀಕಾಂತ್ ಹಾಗೂ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರವೀಂದ್ರ ಅವರೇ ಎಸಿಬಿ ಪೋಲಿಸರ ಕೈಗೆ ಸಿಕ್ಕಿಬಿದ್ದ ಕಳಂಕಿತ ಅಧಿಕಾರಿಗಳಾಗಿದ್ದಾರೆ.
ಕ್ರೀಡಾ ಸಾಮಗ್ರಿಗಳ ಖರೀದಿಗೆ ಮಂಜೂರಾಗಿದ್ದ 50,000ರೂ.ಗಳ ಬಿಡುಗಡೆಗೆ ಗುತ್ತಿಗೆದಾರ ದೇವಯ್ಯ ಎಂಬುವವರಿಗೆ ಹತ್ತು ಸಾವಿರ ರೂ.ಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದ ರಂತೆ. ಮೊದಲ ಪಾವತಿಯಾಗಿ ಹೊಟೇಲೊಂದರಲ್ಲಿ ಐದು ಸಾವಿರ ರೂ.ಗಳ ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.
ಎಸಿಬಿ ಡಿಎಸ್‌ಪಿ ಸಂತೋಷ್ ಬನ್ನಟ್ಟಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.