ಅಲ್ಪಸಂಖ್ಯಾತ ಅಂಗನವಾಡಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಿಸಲು ಸಂಸದ ಡಾ. ಉಮೇಶ ಜಾಧವ ಸೂಚನೆ

0
520

ಕಲಬುರಗಿ,ಮೇ.17:ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಹೆಚ್ಚಿರುವ 396 ಅಂಗನವಾಡಿ ಕಟ್ಟಡಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ಸಂಸದ ಡಾ.ಉಮೇಶ ಜಾಧವ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿ.ಸಿ. ಯಶವಂತ ವಿ. ಗುರುಕರ್ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ಬಾಡಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದಲ್ಲಿ ಕೆ.ಕೆ.ಆರ್.ಡಿ.ಬಿ. ಮಂಡಳಿಯಿAದ ಅನುದಾನ ಒದಗಿಸಲು ಪ್ರಯತ್ನಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿ ಪಾರದರ್ಶಕವಾಗಿ ನಡೆಸಬೇಕು ಎಂದರು.
ಅಲ್ಪಸAಖ್ಯಾತ ಮಹಿಳಾ ವಿದ್ಯಾರ್ಥಿನಿಯರು ಸೇರಿದಂತೆ ಅನೇಕ ಹೆಣ್ಣು ಮಕ್ಕಳು ಕಲಬುರಗಿ ನಗರಕ್ಕೆ ವ್ಯಾಸಂಗಕ್ಕೆ ಬರುತ್ತಾರೆ. ಆದರೆ ಇಲ್ಲಿ ಸೂಕ್ತ ವಸತಿ ನಿಲಯವಿಲ್ಲದೆ ಪರದಾಡುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡುವಂತೆ ತಿಳಿಸಿದರು. ಇದಕ್ಕೆ ಡಿ.ಸಿ. ಯಶವಂತ ವಿ. ಗುರುಕರ್ ಮಾತನಾಡಿ ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯಕ್ಕೆ ಮಕ್ಕಳ ಪ್ರವೇಶಾತಿ ಮಂಜೂರಾತಿ ಸಂಖ್ಯೆ ಕಡಿಮೆ ಇರುವ ಕಾರಣ ಈ ಸಮಸ್ಯವಿದೆ ಎಂದು ವಾಸ್ತಾವಂಶ ತಿಳಿಸಿದರು.
ಇನ್ನೂ ಯಾವುದೇ ಇಲಾಖೆಯಿಂದ ಸಾರ್ವಜನಿಕರಿಗೆ ಸೌಲಭ್ಯ ವಿತರಣೆಗಳಿದಲ್ಲಿ ಜನಪ್ರತಿನಿಧಿಗಳ ನೇತೃತ್ವದಲ್ಲಿ ವಿತರಿಸಬೇಕು. ಈ ಸಂಬAಧ ಕ್ಷೇತ್ರದ ಚುನಾಯಿತ ಶಾಸಕ-ಸಂಸದರಿಗೆ ಮಾಹಿತಿ ನೀಡಬೇಕು ಎಂದರು.
ತಲಾ ಆದಾಯ ಹೆಚ್ಚಳವಾಗುವಂತೆ ಕಾರ್ಯನಿರ್ವಹಿಸಿ; ಕಲಬುರಗಿ ಜಿಲ್ಲೆಯ ಪ್ರತಿ ವ್ಯಕ್ತಿಯ ತಲಾ ಆದಾಯ ತುಂಬಾ ಕೆಳಮಟ್ಟದಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದ ಅವರು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ತಲಾ ಅದಾಯ ವೃದ್ಧಿಗೆ ಶ್ರಮಿಸಬೇಕು ಎಂದು ಅಧಿಕಾರಿಗಳಿಗೆ ಸಂಸದ ಡಾ.ಉಮೇಶ ಜಾಧವ ತಿಳಿಸಿದರು.
ಜಿಲ್ಲೆಯ ಗ್ರಾಮೀಣ ಭಾಗದ ವಸತಿ ಯೋಜನೆಯಲ್ಲಿ 983 ಅಲ್ಪಸಂಖ್ಯಾತ ಫಲಾನುಭವಿಗಳ ಗುರಿ ನೀಡಿದ್ದರೂ, ಇದೂವರೆಗೆ ಗ್ರಾಮ ಸಭೆ ಮೂಲಕ ಆಯ್ಕೆ ಮಾಡದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಮೇ ತಿಂಗಳ ಅಂತ್ಯಕ್ಕೆ ಆಯ್ಕೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ ಮಾತನಾಡಿ ನಗರದ ಮಹೆಬೂಬ್ ನಗರಕ್ಕೆ ಮೌಲಾನಾ ಆಜಾದ್ ಶಾಲೆ ಮಂಜೂರಾಗಿದ್ದು, ಕೂಡಲೆ ನಿವೇಶನ ಗುರುತಿಸಿ ಕಟ್ಟಡ ಕಾಮಗಾರಿ ಆರಂಭಿಸಬೇಕು ಎಂದು ಅಲ್ಪಸಂಖ್ಯಾತ ಅಧಿಕಾರಿಗಳಿಗೆ ಸೂಚಿಸಿದರು.
ಡಿ.ಸಿ. ಯಶವಂತ ವಿ. ಗುರುಕರ್ ಮಾತನಾಡಿ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಮಂಜೂರು ಮಾಡಲಾದ ಟ್ಯಾಕ್ಸಿ ಯೋಜನೆಗಳಿಗೆ ಬ್ಯಾಂಕ್ ಸಾಲ ನೀಡುತ್ತಿಲ್ಲ. 70 ಟ್ಯಾಕ್ಸಿ ಮಂಜೂರು ಮಾಡಿದ್ದು, ಈ ಪೈಕಿ ಕೆಲವರಿಗೆ ಮಾತ್ರ ಸಾಲ ಮಂಜೂರಾಗಿದೆ. ಬಹುತೇಕರಿಗೆ ಬ್ಯಾಂಕ್ ಏಕೆ ಸಾಲ ನೀಡಿಲ್ಲ ಎಂದು ಲೀಡ್ ಬ್ಯಾಂಕ್ ಅಧಿಕಾರಿಗಳನ್ನು ಪ್ರಶ್ನಿಸಿದ ಅವರು ಈ ಯೋಜನೆಗೆ ಕ್ಯಾಲೆಟರಲ್ ಭದ್ರತೆ ಅವಶ್ಯಕತೆ ಇಲ್ಲದಿದ್ದರು ಬ್ಯಾಂಕ್ ಸಾಲ ಮಂಜೂರಾತಿಗೆ ಹಿಂದೇಟು ಹಾಕುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಈ ಸಂಬAಧ ಪ್ರತ್ಯೇಕ ಸಭೆ ನಡೆಸುವುದಾಗಿ ತಿಳಿಸಿದರು.
ಯಾವುದೇ ಇಲಾಖೆಯಲ್ಲಿ ಯೋಜನೆಗಳ ಅನುಷ್ಟಾನಕ್ಕೆ ಅಲ್ಪಸಂಖ್ಯಾತ ಫಲಾನುಭವಿಗಳು ಲಭ್ಯವಿಲ್ಲದಿದ್ದಲ್ಲಿ, ಅಲ್ಪಸಂಖ್ಯಾತ ಸಮುದಾಯ ಹೆಚ್ಚಿರುವ ಪ್ರದೇಶದಲ್ಲಿ ಯೋಜನೆಗೆ ಬಗ್ಗೆ ಜಾಗೃತಿ ಮೂಡಿಸುವ ಮೇಳ ಆಯೋಜಿಸಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ವಾರಕ್ಕೊಮ್ಮೆ ಒಂದು ವಕ್ಫ್ ಆಸ್ತಿ ಅತಿಕ್ರಮಣವನ್ನು ತೆರವುಗೊಳಿಸಲು ಯೋಚಿಸಿದ್ದು, ಈ ಸಂಬAಧ ಅಗತ್ಯ ಮಾಹಿತಿ ಒದಗಿಸುವಂತೆ ವಕ್ಫ್ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಮಹಿಮೂದ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here