ಟೈಲರ್ ಶಿರಚ್ಛೇದನ ಮಾಡಿದ್ದ ಇಬ್ಬರು ಮುಸ್ಲಿಂ ಮೂಲಭೂತವಾದಿ ದುಷ್ಕರ್ಮಿಗಳ ಬಂಧನ

0
908

ಜೈಪುರ, ಜೂನ್. 28: ಉದಯಪುರದಲ್ಲಿ ಟೈಲರ್‌ನನ್ನು ಬರ್ಬರವಾಗಿ ಹತ್ಯೆಗೈದ ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರನ್ನು ವೀಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ ರಾಜಸ್ಥಾನದ ರಾಜ್‌ಸಮಂದ್ ಪ್ರದೇಶದಲ್ಲಿ ಪೊಲೀಸರು ಬಂಧಿಸಲಾಗಿದೆ.
ನೂಪರ್ ಶರ್ಮಾಗೆ ಬೆಂಬಲಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದಕ್ಕೆ ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರು ಟೈಲರ್ ಒಬ್ಬರನ್ನು ಇಂದು ಮಂಗಳವಾರ ಮಧ್ಯಾಹ್ನ 2:30ರ ವೇಳೆಗೆ ಬರ್ಬರವಾಗಿ ಶಿರಚ್ಛೇದ ಮಾಡಿದ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊAಡಿದ್ದರು.
ಉದಯಪುರ ನಗರದ ಮಾಲ್ದಾಸ್ ಬೀದಿಯಲ್ಲಿ ದರ್ಜಿ ಅಂಗಡಿ ನಡೆಸುತ್ತಿದ್ದ ಕನ್ಹಯ್ಯಾ ಲಾಲ್ ಸಾಹು ಕೊಲೆಯಾದ ವ್ಯಕ್ತಿ. ಇವರು ಕೆಲ ದಿನಗಳ ಹಿಂದೆ ನೂಪುರ್ ಶರ್ಮಾ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು.ಈ ಬಗ್ಗೆ ಮುಸ್ಲಿಂ ಯುವಕರು ಕನ್ಹಯ್ಯಾಗೆ ಪದೇ ಪದೇ ಬೆದರಿಕೆ ಹಾಕುತ್ತಿದ್ದರು. ಇದರಿಂದ ಹೆದರಿದ ಆತ ಕೆಲ ದಿನಗಳ ಕಾಲ ಅಂಗಡಿಯನ್ನು ಮುಚ್ಚಿದ್ದರು. ಅಲ್ಲದೇ, ತಮಗೆ ಜೀವ ಬೆದರಿಕೆ ಇರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇಂದು ಅಂಗಡಿಯನ್ನು ತೆರೆದಾಗ ಬಟ್ಟೆ ಹೊಲಿಸಿಕೊಳ್ಳುವ ನೆಪದಲ್ಲಿ ಬಂದ ಮುಸ್ಲಿಂ ಯುವಕರು ಅಳತೆ ಪಡೆಯುತ್ತಿದ್ದಾಗ ಕನ್ಹಯ್ಯಾರ ಶಿರಚ್ಚೇದನ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ.
ಟೈಲರ್ ಶಿರಚ್ಛೇದನ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ದಾಖಲಿಸಿವೆ. ಪರಿಸ್ಥಿತಿ ಕೈ ಮೀರುತ್ತಿದ್ದು, ಈ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಉದಯಪುರದಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.
ಈ ಬಗ್ಗೆ ಪೋಲಿಸ್ ಠಾಣೆಗೆ ದೂರು ನೀಡಿಲಾಗಿ ಟೈಲರ್‌ನನ್ನು ಪೋಲಿಸರು ಬಂಧಿಸಿ ನಂತರ ಬಿಡುಗಡೆ ಮಾಡಿದ್ದರು, ಎಂದಿನAತೆ ಮನೆಯಿಂದ ಅಂಗಡಿಗೆ ಬಂದು ಕೆಲಸ ಪ್ರಾರಂಭಿಸಿದ್ದ ಸಮಯದಲ್ಲಿ ಗ್ರಾಹಕರ ವೇಶದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹರಿತವಾದ ಚಾಕುವಿನಿಂದ ಶಿರಚ್ಚೇದ ಮಾಡಿ, ಶವವನ್ನು ಬೀದಿಯಲ್ಲಿ ಬಿಸಾಕಿ ಪರಾರಿಯಾಗಿದ್ದರೆಂದು ವರದಿಯಾಗಿತ್ತು.
ಇದೀಗ ಇಬ್ಬರು ಆರೋಪಿಗಳನ್ನು ರಾಜಾಸ್ಥಾನದಲ್ಲಿ ಬಂಧಿಸಲಾಗಿದ್ದು, ಆರೋಪಿಗಳ ವಿರುದ್ಧ ಶೀಘ್ರವೇ ತನಿಖೆ ನಡೆಸಿ, ಕಠಿಣ ಶಿಕ್ಷೆಗೆ ಗುರಿಪಡಿಸುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಶಿರಚ್ಛೇದ ಮಾಡಿದ್ದಲ್ಲದೇ ಅದನ್ನು ಸಾಮಾಜಿಕ ಜಾಲತಾಣದಲ್ಲಿ ವೈಭವಿಕರಿಸಿ ಹರಿತವಾದ ಚಾಕು ತೋರಿಸುವ ಮೂಲಕ ಪ್ರಧಾನಿ ಮೋದಿಯವರ ಹತ್ಯೆ ಮಾಡುವುದಾಗಿ ಬೆದರಿಕೆಯನ್ನು ಮೂಲಭೂತವಾದಿ ಕಿಡಿಗೇಡಿಗಳು ಹಾಕಿದ್ದರು.

LEAVE A REPLY

Please enter your comment!
Please enter your name here