ಕಲಬುರ್ಗಿ, ಜು.4- ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಜಿಲ್ಲೆಯ ವಾಡಿ ಪಟ್ಟಣದ ಬಲರಾಮ್ ಚೌಕ್ ಬಳಿ 33 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ.
ಅಕ್ರಮ ಗೋ ಸಾಗಣೆ ಕುರಿತು ಖಚಿತ ಮಾಹಿತಿ ಪಡೆದ ವಾಡಿ ಪೋಲಿಸ್ ಠಾಣೆಯ ಪಿಎಸ್‌ಐ ಮಹಾಂತೇಶ್ ಪಾಟೀಲ್ ಅವರ ನೇತೃತ್ವ ದಲ್ಲಿನ ತಂಡವು ಅಕ್ರಮವಾಗಿ ಸಾಗಿಸುತ್ತಿದ್ದ 17 ಆಕಳು, 8 ಕರುಗಳು, ನಾಲ್ಕು ಹೋರಿಗಳು ಸೇರಿ ಒಟ್ಟು 33 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ರಕ್ಷಿಸಿದ ಜಾನುವಾರುಗಳನ್ನು ಕೊಂಚೂರಿನ ಗೋಶಾಲೆಗೆ ಹಸ್ತಾಂತರಿಸಲಾಗಿದೆ. ಈ ಕುರಿತು ವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.