ಕಲಬುರಗಿ,ಜು. 5:ಕಲಬುರಗಿ ನಗರದ ಡಾ. ಎಸ್. ಎಂ. ಪಂಡಿತ ರಂಗಮAದಿರದಲ್ಲಿ ಇದೇ ಜುಲೈ 6ರಂದು ಸಂಜೆ 5 ಗಂಟೆಗೆ ಗಂಗಾವತಿ ಪ್ರಾಣೇಶ ಅವರ ಹಾಸ್ಯ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಜುಲೈ 6ರಂದು ಕಂದಾಯ ದಿನಾಚರಣೆ ಅಂಗವಾಗಿ ಸಾಂಸ್ಕೃ ತಿಕ ಕಾರ್ಯಕ್ರಮದ ಭಾಗವಾಗಿ ಗಂಗಾವತಿ ಪ್ರಾಣೇಶ ಅವರಿಂದ ಹಾಸ್ಯದ ನಗೆಗಡಲು ನಡೆಯಲಿದೆ.
ಜನರ ಸೇವೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕಂದಾಯ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಕುಟುಂಬ ಸಮೇತ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಗಂಗಾವತಿಯ ಪ್ರಾಣೇಶ ಅವರಿಂದ ಹಾಸ್ಯ ಸಂಜೆ ಆಯೋಜಿಸಲಾಗಿದೆ.
ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಡಾ. ಎನ್. ವಿ.ಪ್ರಸಾದ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಇದೇ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿರಸ್ತೇದಾರ, ಉಪ ತಹಶಿಲ್ದಾರ, ಕಂದಾಯ ನಿರೀಕ್ಷರು ಹಾಗೂ ಗ್ರಾಮ ಲೆಕ್ಕಿಗರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಕಂದಾಯ ನೌಕರರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ತಿಳಿಸಿದ್ದಾರೆ.