ಹುಬ್ಬಳ್ಳಿ, ಜುಲೈ 05: ಸರಳ ವಾಸ್ತು ಶಾಸ್ತçಜ್ಞ ಹಾಗೂ ಖ್ಯಾತ ಜ್ಯೋತಿಷಿ ಗುರೂಜಿ ಚಂದ್ರಶೇಖರ ಅವರ ಹತ್ಯೆಯ ಹಂತಕರನ್ನು ಹೆಡೆಮುರಿ ಕಟ್ಟುವಲ್ಲಿ ಹುಬ್ಬಳ್ಳಿ ಪೋಲಿಸರು ಯಶಸ್ವಿಯಾಗಿದ್ದಾರೆ.
ಹುಬ್ಭಳ್ಳಿ ನಗರದ ಗೋಕುಲ್ ರಸ್ತೆಯ ಪ್ರೆಸಿಡೆಂಟ್ ಹೋಟೆಲ್‌ನಲ್ಲಿ ಇಂದು ಮಧ್ಯಾಹ್ನ 12.28ಕ್ಕೆ ಹೋಟೆಲ್‌ನ ರಿಷಪ್ಯನಲ್ಲಿಯೇ ಹತ್ತಾರು ಜನರ ಎದುರುಗಡೆ ಹರಿವಾದ ಚಾಕುವಿನಿಂದ 60 ಬಾರಿ ತಿವಿದು ಚಂದ್ರಶೇಖರ ಗುರೂಜಿ ಅವರನ್ನು ಹತ್ಯೇ ಮಾಡಿ ಹುಬ್ಬಳ್ಳಿ ನಗರ ಬೆಚ್ಚಿ ಬಿಳುವಂತೆ ಮಾಡಿದ ಹಂತಕರನ್ನು ಕೇವಲ 4 ಗಂಟೆಗಳಲ್ಲಿ ಪೋಲಿಸ್ ಖೇಡ್ಗಾಕ್ಕೆ ಬಿಳಿಸಿದ್ದಾರೆ.
ಈ ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೊಲೆ ಮಾಡಿ ಕಾರ್‌ನಲ್ಲಿ ಎಸ್ಕೇಪ್ (ಇsಛಿಚಿಠಿe) ಆಗಿದ್ದ ಹಂತಕರು, ಕೇವಲ ನಾಲ್ಕೇ ಗಂಟೆಗಳಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಸರಳ ವಾಸ್ತು ಮೂಲಕ ಜನಪ್ರಿಯರಾಗಿದ್ದ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಹೋಟೆಲ್‌ನಲ್ಲಿ ಧಾರುಣವಾಗಿ ಹತ್ಯೆ ಮಾಡಲಾಗಿದೆ. ಹೋಟೆಲ್‌ನಲ್ಲಿ ತಂಗಿದ್ದ ವೇಳೆ ಆಗಮಿಸಿದ ಇಬ್ಬರು ಹಂತಕರು, ಚಾಕುವಿನಿಂದ ಮತ್ತೆ ಮತ್ತೆ ಇರಿದು ಗುರೂಜಿಯನ್ನು ಕೊಲೆ ಮಾಡಿ, ಬಳಿಕ ಕಾರ್‌ನಲ್ಲಿ ಎಸ್ಕೇಪ್ ಆಗಿದ್ದರು.
ಬಂಧಿತರನ್ನು ಮಹಾಂತೇಶ್ ಹಾಗೂ ಮಂಜುನಾಥ್ ಎಂದು ಗುರುತಿಸಲಾಗಿದೆ. ಈ ಇಬ್ಬರು ಆರೋಪಿಗಳು ಗುರೂಜಿ ಆಪ್ತ ವಲಯದಲ್ಲೇ ಗುರುತಿಸಿಕೊಂಡವರು ಎಂಬುದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ, ಸದ್ಯ ಧಾರವಾಡದ ಗೋಕುಲ ರಸ್ತೆ ಠಾಣೆಯ ಪೊಲೀಸರು ರಾಮದುರ್ಗದ ಬಸವೇಶ್ವರ ಸರ್ಕಲ್‌ನಲ್ಲಿ ಇಬ್ಬರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಹಂತಕರನ್ನು ಹಿಡಿಯಲು ಎಸಿಪಿ ವಿನೋದ್ ಮುಕ್ತೇದಾರ್ ನೇತೃತ್ವದಲ್ಲಿ ಐದು ತಂಡಗಳನ್ನು ರಚನೆ ಮಾಡಲಾಗಿತ್ತು. ಹುಬ್ಬಳ್ಳಿಯ ಎಂಟೂ ದಿಕ್ಕಿನಲ್ಲಿ ನಾಕಾಬಂಧಿ ಹಾಕಲಾಗಿತ್ತು. ಅಕ್ಕ-ಪಕ್ಕದ ಜಿಲ್ಲೆಗಳ ಪೊಲೀಸರಿಗೂ ಮಾಹಿತಿ ರವಾನೆ ಮಾಡಲಾಗಿತ್ತು ಎಂದು ಹುಬ್ಬಳ್ಳಿಯ ಪೊಲೀಸ್ ಕಮಿಷನರ್ ಲಾಬೂರಾಮ್ ಮಾಹಿತಿ ನೀಡಿದ್ದಾರೆ.
ಮಹಾಂತೇಶ್ ಶಿರೋಳ್, ಮಂಜುನಾಥ್ ದುಮ್ಮವಾಡ ಎಂಬುವವರೇ ಹಂತಕರು ಎಂದು ತಿಳಿದು ಬಂದಿದೆ. ಇಬ್ಬರೂ ಆರೋಪಿಗಳು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ದುಮ್ಮವಾಡ ನಿವಾಸಿಗಳು ಎಂದು ತಿಳಿದು ಬಂದಿದೆ. ಇಬ್ಬರು ಆರೋಪಿಗಳು ಗುರೂಜಿ ಆಪ್ತ ವಲಯದಲ್ಲೇ ಗುರುತಿಸಿಕೊಂಡವರು ಎಂಬುದು ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ.
ಚಂದ್ರಶೇಖರ್ ಗುರೂಜಿ ಶಿಷ್ಯರ ಹೆಸರಿನಲ್ಲಿ ಆಸ್ತಿ ಮಾಡಿ ಇಟ್ಟಿದ್ದರು ಎನ್ನಲಾಗಿದೆ. ಆದರೆ ಆಸ್ತಿ ವಾಪಸ್ ಕೇಳಿದ್ದಕ್ಕೆ ಹತ್ಯೆ ನಡೆದಿರಬಹುದು ಅಂತ ಶಂಕಿಸಲಾಗಿದೆ.
ಮೂಲಗಳ ಮಾಹಿತಿ ಪ್ರಕಾರ ಮಹಾಂತೇಶ ಶಿರೋಳ ಗುರೂಜಿ ಜತೆ ಬಹಳ ವರ್ಷದಿಂದ ಜತೆಗಿದ್ದ. ಗೋಕುಲ್ ರೋಡ್‌ನ ಗೂರೂಜಿ ಅಪಾರ್ಟ್ಮೆಂಟ್‌ನಲ್ಲೇ ಹಂತಕ ವಾಸ ಮಾಡುತ್ತಿದ್ದ. ಗೋಕುಲ್ ರಸ್ತೆ ಹಿಂಭಾಗದ ಅಪಾರ್ಟ್ಮೆಂಟ್‌ನಲ್ಲಿ ಗುರೂಜಿ ವಾಸವಿದ್ದರು. 2016ರವರೆಗೂ ಗುರೂಜಿ ಜತೆಗೆ ಮಹಾಂತೇಶ್ ಇದ್ದರೆ, 2019ರವರೆಗೂ ಗುರೂಜಿ ಜತೆಗೆ ಹಂತಕನ ಪತ್ನಿ ಕೆಲಸಕ್ಕಿದ್ದಳು. ಇವರಿಬ್ಬರಿಗೂ ಮದುವೆ ಮಾಡಿಸಿದ್ದೇ ಚಂದ್ರಶೇಖರ್ ಗುರೂಜಿ ಎಂದೂ ಹೇಳಲಾಗುತ್ತಿದೆ.
ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್‌ನಲ್ಲಿ ಹಾಡಹಗಲೇ ಭಕ್ತರ ಸೋಗಿನಲ್ಲಿ ಬಂದ ಇಬ್ಬರು ಚಾಕುವಿನಿಂದ ಇರಿದು ಚಂದ್ರಶೇಖರ್ ಗುರೂಜಿಯನ್ನು ಹತ್ಯೆ ಮಾಡಿದ್ದರು. ಚಂದ್ರಶೇಖರ್ ಗುರೂಜಿ ಇಂದು ಹೋಟೆಲಿನಲ್ಲಿ ತಂಗಿದ್ದರು. ಹೋಟೆಲಿನಲ್ಲಿ ತಂಗಿದ್ದ ಇವರನ್ನು ಕರೆ ಮಾಡಿದ ಇಬ್ಬರು ರಿಸೆಪ್ಶನಿಸ್ಟ್ ಜಾಗಕ್ಕೆ ಬರಲು ಹೇಳಿದ್ದಾರೆ.
ಗುರೂಜಿ ಇವರ ಬಳಿ ಬರುತ್ತಿದ್ದಂತೆ ಇಬ್ಬರು ಎದ್ದು ನಿಂತಿದ್ದಾರೆ. ಗುರೂಜಿ ಕುಳಿತ ಬಳಿಕ ಒಬ್ಬ ಆಶೀರ್ವಾದ ಪಡೆಯುವ ನಾಟಕ ಮಾಡುತ್ತಿದ್ದರೆ, ಮತ್ತೊಬ್ಬ ನಿಂತಿದ್ದ. ಕೆಲ ಕ್ಷಣದಲ್ಲೇ ಮುಂದುಗಡೆ ನಿಂತಿದ್ದ ಯುವಕ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಮತ್ತೊಬ್ಬ ಚಾಕುವಿನಿಂದ ಇರಿದಿದ್ದಾನೆ. ನಂತರ ಇಬ್ಬರು ಮನ ಬಂದAತೆ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಒಟ್ಟು 20 ಸೆಕೆಂಡ್‌ನಲ್ಲಿ 60 ಬಾರಿ ಚಾಕುವಿನಿಂದ ಇರಿಯಲಾಗಿತ್ತು.