ಕೃಷಿ ಉತ್ಪನ್ನಕ್ಕೆ ಸೀಮಿತವಾಗದೇ ರೈತ ಅನ್ನದಾತ ಉದ್ಯಮಿ-ವ್ಯಾಪಾರಿಯಾಗಬೇಕು:ಬಿ.ಸಿ.ಪಾಟೀಲ

0
771

ಕಲಬುರಗಿ,ಆ. 26:ಕೃಷಿ ಉತ್ಪನ್ನ ಬೆಳೆಯಕಷ್ಟೆ ಸೀಮಿತವಾಗದೇ ರೈತ ಕೃಷಿಯಲ್ಲಿ ಪ್ರಗತಿ ಸಾಧಿಸುವುದರೊಂದಿಗೆ ಯಂತ್ರೋಪಕರಣಗಳ ಸಹಾಯದ ಜೊತೆಗೆ ಅಧುನಿಕ ತಂತ್ರಜ್ಞಾನ ಬಳಸಿಕೊಂಡು ಕೃಷಿ ಸಂಸ್ಕರಣ ಘಟಕ ಸ್ಥಾಪಿಸುವ ಮೂಲಕ ಅನ್ನದಾತ ಉದ್ಯಮಿ-ವ್ಯಾಪಾರಿಯಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಕಲಬುರಗಿ ಹೊರವಲಯದ ಕೋಟನೂರ(ಡಿ) ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆವರಣದಲ್ಲಿ ಶುಕ್ರವಾರ ಹೊಸದಾಗಿ ತೆರೆಯಲಾದ ಕಲಬುರಗಿ ವಿಭಾಗದ ಜಂಟಿ ಕೃಷಿ ನಿರ್ದೇಶಕರು (ಜಾಗೃತ ಕೋಶ) ಕಚೇರಿ ಉದ್ಘಾಟಿಸಿ ಮತ್ತು 9.15 ಕೋಟಿ ರೂ. ವೆಚ್ಚದ ಕೋಲ್ಡ್ ಸ್ಟೋರೇಜ್ ಘಟಕಕ್ಕೆ ಶಂಕುಸ್ಥಾನೆ ನೆರವೇರಿಸಿ ಮಾತನಾಡುತ್ತಿದ್ದರು.
ಮುಂದುವರೆದ ಅವರು ಇದೇ ರೀತಿಯ ಕೋಲ್ಡ್ ಸ್ಟೋರೇಜ್‌ಗಳನ್ನು ರಾಜ್ಯದ 11 ಕಡೆ ಸ್ಥಾಪಿಸಲಾಗುತ್ತಿದೆ ಎಂದರು. ರೈತ ಬೆಳೆದ ಬೆಳೆ, ತರಕಾರಿ, ಹಣ್ಣುಗಳನ್ನು ಸಂಸ್ಕರಣೆ ಮಾಡಿ ನೇರವಾಗಿ ಗ್ರಾಹಕರಿಗೆ ತಲುಪುವಂತಾಗಬೇಕು. ಈ ಹಿನ್ನೆಲೆಯಲ್ಲಿ ಅಹಾರ ಸಂಸ್ಕರಣ ಘಟಕ ಸ್ಥಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆತ್ಮ ನಿರ್ಭರನಡಿ 10 ಸಾವಿರ ಕೋಟಿ ರೂ. ಮೀಸಲಿಟ್ಟಿದಲ್ಲದೆ ಕೃಷಿ ವಲಯಕ್ಕೆ 1 ಲಕ್ಷ ಕೋಟಿ ರೂ. ಒದಗಿಸಿದ್ದಾರೆ ಎಂದರು.

LEAVE A REPLY

Please enter your comment!
Please enter your name here