ಗಣೇಶ ವಿಸರ್ಜನೆ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಡಿ.ಸಿ. ಆದೇಶ

0
1017

ಕಲಬುರಗಿ,ಸೆ.01:ಪ್ರಸಕ್ತ 2022ನೇ ಸಾಲಿನ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕೆಳಕಂಡ ದಿನಾಂಕಗಳAದು ಜಿಲ್ಲೆಯಾದ್ಯಂತ (ಕಲಬುರಗಿ ನಗರ ಹೊರತುಪಡಿಸಿ) ಎಲ್ಲ ತರಹದ ಮದ್ಯ ಮಾರಾಟ ಹಾಗೂ ಸಾಗಣೆಯನ್ನು ನಿಷೇಧಿಸಿ ಕಲಬುರಗಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಯಶವಂತ ವಿ. ಗುರುಕರ್ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.
ಇದೇ ಸೆಪ್ಟೆಂಬರ್ 4 ರ ಬೆಳಿಗ್ಗೆ 6 ಗಂಟೆಯಿAದ ಸೆಪ್ಟೆಂಬರ್ 5ರ ಬೆಳಿಗ್ಗೆ 6 ಗಂಟೆಯವರೆಗೆ, ಸೆಪ್ಟೆಂಬರ್ 6ರ ಬೆಳಿಗ್ಗೆ 6 ಗಂಟೆಯಿAದ ಸೆಪ್ಟೆಂಬರ್ 7ರ ಬೆಳಿಗ್ಗೆ 6 ಗಂಟೆಯವರೆಗೆ, ಸೆಪ್ಟೆಂಬರ್ 8ರ ಬೆಳಿಗ್ಗೆ 6 ಗಂಟೆಯಿAದ ಸೆಪ್ಟೆಂಬರ್ 9ರ ಬೆಳಿಗ್ಗೆ 6 ಗಂಟೆಯವರೆಗೆ ಹಾಗೂ ಸೆಪ್ಟೆಂಬರ್ 10ರ ಬೆಳಿಗ್ಗೆ 6 ಗಂಟೆಯಿAದ ಸೆಪ್ಟೆಂಬರ್ 11ರ ಬೆಳಗಿನ 6 ಗಂಟೆಯವರೆಗೆ ಎಲ್ಲಾ ತರಹದ ಮದ್ಯಪಾನ, ಸರಾಯಿ, ಶೇಂಧಿ, ಸ್ವದೇಶಿ ಹಾಗೂ ವಿದೇಶಿ ಮದ್ಯಪಾನ, ಮಾದಕ ವಸ್ತುಗಳು, ಮದ್ಯ ಮಾರಾಟ ಮಾಡುವುದನ್ನು ಹಾಗೂ ಎಲ್ಲ ಮದ್ಯದ ಅಂಗಡಿಗಳನ್ನು ಮುಚ್ಚುವಂತೆಯೂ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here