ನಾಳೆ ಮುಖ್ಯಮಂತ್ರಿಗಳಿoದ ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ

0
535

ಬೆಂಗಳೂರು, ಸೆ. 29: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 37ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ನಾಳೆ ಸೆಪ್ಟೆಂಬರ್ 30ರಂದು ವಿಜಯಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಡುಗಡೆಗೊಳಿಸಲಿದ್ದಾರೆ.
ವಿಜಯಪುರದ ಜ್ಞಾನಜ್ಯೋತಿ ಶ್ರೀ ಸಿದ್ಧೇಶ್ವರ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಮಧ್ಯಾಹ್ನ 12.20 ಗಂಟೆಗೆ ವಿಜಯಪುರ ಶ್ರೀ ಸಿದ್ದೇರ್ಶವರ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಲಾಂಚನ ಬಿಡುಗಡೆ ಸಮಾರಂಭ ನಡೆಯಲಿದೆ.
ಸಮಾರಂಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ ಹಾಗೂ ಇನ್ನಿತರ ಪತ್ರಕರ್ತರ ಸಂಘದ ರಾಜ್ಯ ಪದಾಧಿಕಾರಿಗಳು ಸೇರಿದಂತೆ ವಿಜಯಪುರ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಈ ಸಮ್ಮೇಳನ ಬಹುಷಃ ಈ ವರ್ಷದ ನವ್ಹೆಂಬರ್‌ನಲ್ಲಿ ನಡೆಯುವ ಸಾಧ್ಯತೆಯಿದೆ.

Total Page Visits: 709 - Today Page Visits: 1

LEAVE A REPLY

Please enter your comment!
Please enter your name here