ಕಲಬುರ್ಗಿ, ಜ.26- ಆಳಂದ್ ತಾಲ್ಲೂಕಿನ ಜಿಡಗಾದ ನವಕಲ್ಯಾಣ ಮಂಟಪದಲ್ಲಿ ಡಿಸೆಂಬರ್ 2ರಂದು ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳ 38ನೇ ಗುರುವಂದನಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಕಾಂತಾರ ಕನ್ನಡ ಚಲನಚಿತ್ರ ನಟ ಹಾಗೂ ನಿರ್ದೇಶಕ ರಿಷಬ್‌ಶೆಟ್ಟಿ ಅವರಿಗೆ ಸಿದ್ದಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸ್ವಾಗತ ಸಮಿತಿಯ ಅಧ್ಯಕ್ಷ ಚಿನ್ಮಯಗಿರಿಯ ವೀರಮಹಾಂತ ಶಿವಾಚಾರ್ಯರು ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಸಹ ಭಕ್ತರು ಗುರುವಂದನಾ ಮಹೋತ್ಸವವನ್ನು ವಿಜೃಂಭಣೆಯಿAದ ಆಚರಿಸುವರು ಎಂದರು.
ಪ್ರತಿ ವರ್ಷವೂ ಸಿದ್ದಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಈ ಬಾರಿ ಖ್ಯಾತ ನಟ ರಿಷಬ್‌ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ.ಗಳ ನಗದು ಬಹುಮಾನ ಹಾಗೂ ಚಿನ್ನದ ಪದಕ ಹೊಂದಿದೆ ಎಂದು ಅವರು ಹೇಳಿದರು.
ಗುರುವಂದನಾ ಮಹೋತ್ಸವದ ಅಂಗವಾಗಿ ಡಿಸೆಂಬರ್ 1ರಂದು ಶ್ರೀಮಠದಲ್ಲಿ 38 ಗೋವುಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಅಲ್ಲದೇ 5000 ಸಸಿಗಳನ್ನು ನೆಡಲಾಗುವುದು. ಮರುದಿನ 2ರಂದು ಕಾಶೀ ಪೀಠದ 9 ಜನ ಅರ್ಚಕರಿಂದ ನವಕಲ್ಯಾಣಾಧೀಶರಿಗೆ ತನಾರತಿ ನೆರವೇರಿಸಲಾಗುತ್ತದೆ. ಉಚಿತ ಆರೋಗ್ಯ ಶಿಬಿರವನ್ನೂ ಸಹ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಸಂಜೆ ಖ್ಯಾತ ಗಾಯಕ ವಿಜಯಪ್ರಕಾಶ್ ಮತ್ತು ತಂಡದವರಿAದ ಸ್ವರ ಸಂಗೀತ ಸಂಭ್ರಮ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು ಸೇರಿದಂತೆ ಸುಮಾರು ಒಂದು ಲಕ್ಷಕ್ಕಿಂತಲೂ ಹೆಚ್ಚು ಭಕ್ತರು ಸೇರಲಿದ್ದಾರೆ ಎಂದು ಅವರು ಹೇಳಿದರು.
ಗುರುವಂದನಾ ಮಹೋತ್ಸವಕ್ಕೆ ನಾಡಿನ ವಿವಿಧೆಡೆಯಿಂದ ಅಪಾರ ಸಂಖ್ಯೆಯ ಭಕ್ತರು ಆಗಮಿಸುತ್ತಿರುವುದರಿಂದ ಬೆಳಗಾವಿ, ರಾಯಚೂರು ಸೇರಿದಂತೆ ವಿವಿಧೆಡೆ ವಿಶೇಷ ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಮಾದನಹಿಪ್ಪರಗಾದ ಶಿವಲಿಂಗ ಮಹಾಸ್ವಾಮೀಜಿ, ರಾಜ್ಯ ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.
Home Uncategorized ಜಿಡಗಾದಲ್ಲಿ ಡಿ. 2ಕ್ಕೆ ಗುರುವಂದನಾ ಮಹೋತ್ಸವ:ನಟ ರಿಷಬ್ ಶೆಟ್ಟಿಯವರಿಗೆ ಸಿದ್ದಶ್ರೀ ಪ್ರಶಸ್ತಿ ಪ್ರದಾನ