ಪಿಎಸ್ಐ ನೇಮಕಾತಿ ಅಕ್ರಮ: ದಿವ್ಯಾ ಹಾಗರಗಿ ಸೇರಿ ೨೬ ಆರೋಪಿಗಳಿಗೆ ಜಾಮೀನು

0
1740

ಕಲಬುರಗಿ: ಪಿಎಸ್ ಐ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿ ಜೈಲು ಪಾಲಾದ ೨೬ ಜನ ಆರೋಪಿಗಳಿಗೆ ಗುರುವಾರ ಜಿಲ್ಲಾ ನ್ಯಾಯಲಯದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
ಕಿಂಗ್ ಪಿನ್ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ಕಾಶಿನಾಥ್ ಚಿಲ್, ಡಿ ವೈ ಎಸ್ ಪಿ ಮಲ್ಲಿಕರ‍್ಜುನ ಸಾಲಿ ಸೇರಿ ೨೬ ಜನರಿಗೆ ಜಾಮೀನು ಲಭಿಸಿದೆ.
ಕಲಬುರಗಿ ಜಿಲ್ಲಾ ಸತ್ರ ನ್ಯಾಯಾಲಯ ನ್ಯಾಯಾಧಿಶರಾದ ಕೆ. ಬಿ. ಪಾಟೀಲ್ ಎಲ್ಲರಿಗೂ ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ನ್ಯಾಯಾಲಯ ಶರತ್ತು ಬದ್ದ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಇದರೊಂದಿಗೆ ಪಿಎಸ್ಐ ನೇಮಕಾತಿಯ ಅಕ್ರಮ ಪ್ರಕರಣದಲ್ಲಿ ಜೈಲು ಸೇರಿದ್ದ ಒಟ್ಟು ೩೬ ಜನರಿಗೆ ಜಾಮೀನು ಸಿಕ್ಕಂತಾಗಿದೆ.

LEAVE A REPLY

Please enter your comment!
Please enter your name here