ಕಲಬುರ್ಗಿಗೆ ಜನವರಿ 19ರಂದು ಪ್ರಧಾನಿ ಮೋದಿ
ಮಳಖೇಡದಲ್ಲಿ ದಾಖಲೆಯ ಬೃಹತ್ ಸಮಾವೇಶ

0
651

ಕಲಬುರ್ಗಿ, ಜು.11- ಜಿಲ್ಲೆಗೆ ಇದೇ ತಿಂಗಳು 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದು, ಅಂದು ಸೇಡಂ ತಾಲ್ಲೂಕಿನ ಮಳಖೇಡದಲ್ಲಿ ತಾಂಡಾ ಮತ್ತು ಗೊಲ್ಲರಹಟ್ಟಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣಾ ಬೃಹತ ಸಮಾವೇಶ ಏರ್ಪಡಿಸಲಾಗಿದೆ ಎಂದು ಶಾಸಕರೂ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ರಾಜಕುಮಾರ ಪಾಟೀಲ್ ತೇಲ್ಕೂರ್ ಅವರು ಹೇಳಿದ್ದಾರೆ.
ಅವರು ಬುಧವಾರ ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಯಲ್ಲಿ ಮಾತನಾಡುತ್ತ, ಸುಮಾರು 60 ಎಕರೆ ವಿಶಾಲವಾದ ಸ್ಥಳದಲ್ಲಿ ಈ ಬೃಹತ್ ಸಮಾವೇಶ ಏರ್ಪಡಿಸಲಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳ 51900 ತಾಂಡಾ ಮತ್ತು ಗೊಲ್ಲರಹಟ್ಟಿ ನಿವಾಸಿಗಳಿಗೆ ನೋಂದಣಿಯೊAದಿಗೆ ಹಕ್ಕುಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿತರಿಸಲಿದ್ದಾರೆ ಎಂದರು.
ಸಮಾವೇಶದಲ್ಲಿ ಪಾಲ್ಗೊಳ್ಳುವ ಐದು ಜಿಲ್ಲೆಗಳ ತಾಂಡಾ ನಿವಾಸಿಗಳಿಗಾಗಿ ಜಿಲ್ಲಾಡಳಿತದಿಂದ ಸುಮಾರು 2500 ಸಾರಿಗೆ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ
ಈ ಸಮಾವೇಶ ಒಂದು ದಾಖಲೆಯ ಅದರಲ್ಲೂ ಗಿನ್ನಿಸ್ ದಾಖಲೆ ನಿರ್ಮಿಸುವಂತಹ ಕಾರ್ಯಕ್ರಮವಾಗಲಿ ಎಂದ ಅವರು ಅಂದು ಬೆಳಿಗ್ಗೆ ನಗರದ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ ನಂತರ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಸಮಾವೇಶ ಜರುಗಲಿರುವ ಮಳಖೇಡ ಬಳಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‌ಗೆ ಬಂದಿಳಿಯುವರು. ಹೆಲಿಪ್ಯಾಡ್‌ನಲ್ಲಿ ಒಟ್ಟು ನಾಲ್ಕು ಹೆಲಿಕಾಪ್ಟರ್‌ಗಳು ಬಂದಿಳಿಯುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.
ಸೇಡಂ ತಾಲ್ಲೂಕಿನ ಮಳಖೇಡದ ಬಳಿ ರಾಜ್ಯ ಹೆದ್ದಾರಿಗೆ ಹೊಂದಿಕೊAಡAತೆ ಸುಮಾರು 60 ಎಕರೆ ವಿಶಾಲ ಪ್ರದೇಶದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಪ್ರಧಾನಿ ಅಂದು ಕಲಬುರ್ಗಿ ಸೇರಿದಂತೆ ಯಾದಗಿರಿ, ಬೀದರ್, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮತ್ತು ಜಿಲ್ಲೆಯ ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳಿಗೆ ಚಾಲನೆ ನೀಡುವರು ಎಂದು ಅವರು ತಿಳಿಸಿದರು.
ವೇದಿಕೆ ನಿರ್ಮಾಣ, ಹೆಲಿಪ್ಯಾಡ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ, ಸುಗಮ ಸಂಚಾರ, ಸಾರ್ವಜನಿಕರ ಮತ್ತು ಗಣ್ಯರ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ, ಭದ್ರತೆ ಹೀಗೆ ಎಲ್ಲವು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯ ವಿವಿಧ ಸ್ಥಳಗಳಿಂದ ಆಗಮಿಸುವ ಪಕ್ಷದ ಕಾರ್ಯಕರ್ತರಿಗಾಗಿ 10,000 ವಿವಿಧ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು ಐದು ಲಕ್ಷ ಜನರು ಭಾಗವಹಿಸುವರು. ಊಟ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಸಹ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಈ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ ಸೇರಿದಂತೆ ಹಲವಾರು ರಾಜ್ಯ ಸರಕಾರದ ಸಚಿವರುಗಳು, ಐದು ಜಿಲ್ಲೆಗಳ ಬಿಜೆಪಿಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಶಾಸಕ ಬಸವರಾಜ್ ಮತ್ತಿಮೂಡ್, ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ, ಬಿಜೆಪಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೆವಾಡಗಿ, ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಾಟೀಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here