ಬಿಎಸ್ವೆöÊ ಮನೆಗೆ ಕಲ್ಲು ತೂರಾಟ
ಕಾಂಗ್ರೆಸ್ ಪ್ರಚೋದ£:ಬೊಮ್ಮಾಯಿ

0
766

ಕಲಬುರಗಿ, ಮೆ> 28: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ಕಲ್ಲು ತೂರಾಟವನ್ನು ಕಾಂಗ್ರೆಸ್ ವ್ಯವಸ್ಥಿತವಾಗಿ ಪ್ರಚೋದನೆ ನೀಡಿ ಮಾಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಮಂಗಳವಾರ ಕಲಬುರಗಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತ, . ಬಿಜೆಪಿ ಕುತಂತ್ರ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಅಲ್ಲಿ ಕ್ಯಾಮರಾದಲ್ಲಿ ಸೆರೆಸಿಕ್ಕವರು ಕಾಂಗ್ರೆಸ್ ನಾಯಕರು. ಅವರು ಹಿಂದಿನ ದಿನ ಜನಾಂಗದವರನ್ನು ತಪ್ಪು ದಾರಿಗೆ ಎಳೆದು, ಎಸ್‌ಸಿ ಪಟ್ಟಿಯಿಂದ ಜನಾಂಗವನ್ನು ತೆಗೆಯುತ್ತಾರೆ ಎಂದು ಸುಳ್ಳು ಹೇಳಿ ಪ್ರಚೋದಿಸಿ, ರಾತ್ರಿ ಸಭೆ ಕರೆದು ವ್ಯವಸ್ಥಿತವಾಗಿ ಕಾಂಗ್ರೆಸ್ ಮಾಡಿರುವುದು. ಸಾಕ್ಷಿ ಸಮೇತವಾಗಿ ನಾನು ಹೇಳುತ್ತಿರುವುದು. ಸುಳ್ಳು ಹೇಳುವುದನ್ನು ಡಿ.ಕೆ.ಶಿವಕುಮಾರ್ ಬಿಡಬೇಕು ಎಂದರು.
ಎಸ್.ಟಿ. ಸೋಮಶೇಖರ್ ಹಾಗೂ ಬಿ.ಎ. ಬಸವರಾಜ ಅವರು ಚುನಾವಣೆ ಘೋಷಣೆ ಯಾದ ನಂತರ ವಲಸೆ ಬರಲಿದ್ದಾರೆ ಎಂದು ಚೆಲುವ ನಾರಾಯಣಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರೇ ಒಬ್ಬ ವಲಸಿಗರು, ಅವರ ಮಾತು ನಂಬಲು ಆಗುತ್ತದೆಯೇ ಎಂದರು.
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಕೇಂದ್ರ ಗೃಹಸಚಿವರು ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.

LEAVE A REPLY

Please enter your comment!
Please enter your name here