ಚುನಾವಣೆ ರ‍್ತವ್ಯದಲ್ಲಿ ನರ‍್ಲಕ್ಷ್ಯತನ, ಜೆಸ್ಕಾಂ ಎಂ.ಡಿ. ಆಪ್ತ ಕರ‍್ಯರ‍್ಶಿ ಅಮಾನತ್ತು

0
426

ಕಲಬುರಗಿ,ಏ.13:ಚುನಾವಣೆ ಕರ್ತವ್ಯದಲ್ಲಿ ನಿರ್ಲಕ್ಷತನ, ಬೇಜವಾಬ್ದಾರಿತನ ಮತ್ತು ಉಡಾಫೆಯಿಂದ ವರ್ತಿಸಿ, ಚುನಾವಣೆ ಕಾರ್ಯಕ್ಕೆ ತೊಂದರೆನ್ನುಂಟು ಮಾಡಿ ಕರ್ತವ್ಯಲೋಪವೆಸಗಿದ‌ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕಲಬುರಗಿಯ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಆಪ್ತ ಕಾರ್ಯದರ್ಶಿ ಮಹ್ಮದ ಮೀನಾಜುದ್ದಿನ ಅವರನ್ನು ಅಮಾನತ್ತು ಮಾಡಿ ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ.
ಚುನಾವಣೆ ಕರ್ತವ್ಯದಲ್ಲಿನ ಬೇಜವಾಬ್ದಾರಿತನ ಮತ್ತು ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಕಲಂ 134 ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಕಲಂ 28 (ಎ) ಮತ್ತು ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು-1957ರ ನಿಯಮ 10 (1) (ಡಿ)ರಂತೆ ಇಲಾಖಾ ವಿಚಾರಣೆ ಬಾಕಿ ಇರಿಸಿ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ.
ಅಮಾನತ್ತಿನ ಅವಧಿಯಲ್ಲಿ ಕಚೇರಿ ಮುಖ್ಯಸ್ಥರ ಪರವಾನಿಗೆ ಪಡೆಯದೇ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ. ಈ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು-1958ರ ನಿಯಮ 98ರ ಪ್ರಕಾರ ಜೀವನಾಂಶ ಭತ್ಯೆ ಪಡೆಯಲು ನೌಕರರು ಅರ್ಹರಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here