ವಿಧಾನಸಭಾ ಚುನಾವಣೆ: ದತ್ತಾತ್ರೇಯ ಪಾಟೀಲ್, ಚಂದು ಪಾಟೀಲ್, ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ, ಕನೀಜ್ ಫಾತೀಮಾ ಸೇರಿದಂತೆ 29 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

0
433

ಕಲಬುರಗಿ,ಏ.17:ಕಲಬುರಗಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ 10ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮೂರನೇ ದಿನವಾದ ಸೋಮವಾರ ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ 29 ಅಭ್ಯರ್ಥಿಗಳಿಂದ 40 ನಾಮಪತ್ರಗಳು ಸಲ್ಲಿಕೆಯಾಗಿವೆ.
34-ಅಫಜಲಪುರ ವಿಧಾನಸಭಾ ಕ್ಷೇತ್ರ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಶಿವರಾಜ ಗುರುಶಾಂತಪ್ಪ-1 ನಾಮಪತ್ರ, ಆರ್.ಡಿ. ಪಾಟೀಲ ಅವರು ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ-2 ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ 1 ನಾಮಪತ್ರ ಹಾಗೂ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಲ್ಕಾಜಪ್ಪ ಯಶವಂತರಾವ್ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.
35-ಜೇವರ್ಗಿ ವಿಧಾನಸಭಾ ಕ್ಷೇತ್ರ: ಪಕ್ಷೇತರ ಅಭ್ಯರ್ಥಿಯಾಗಿ ಆಂಜನೇಯ ಶರಣಪ್ಪ-1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಕಾಶಿನಾಥ ಸಾಯಿಬಣ್ಣ ಪಾಪಿ 1 ನಾಮಪತ್ರ, ಜನತಾದಳ (ಜಾತ್ಯಾತೀತ) ಪಕ್ಷದ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ದೊಡ್ಡಪ್ಪಗೌಡ ಶಿವಲಿಂಗಪ್ಪಗೌಡ ಅವರು ತಲಾ 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಧರ್ಮರಾಯ ಗುರುಸಿದ್ದಪ್ಪ-1 ನಾಮಪತ್ರ, ಭಾರತೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಜಯಸಿಂಗ್ 1 ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ವಕೀಲ ಪಟೇಲ್ 1 ನಾಮಪತ್ರ ಸಲ್ಲಿಸಿದ್ದಾರೆ.
40-ಚಿತ್ತಾಪುರ ವಿಧಾನಸಭಾ ಕ್ಷೇತ್ರ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪ್ರಿಯಾಂಕ್ ಖರ್ಗೆ ಅವರು 4 ನಾಮಪತ್ರ ಹಾಗೂ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಮಣಿಕಂಠ ರಾಠೋಡ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.
41-ಸೇಡಂ ವಿಧಾನಸಭಾ ಕ್ಷೇತ್ರ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಡಾ. ಶರಣಪ್ರಕಾಶ ರುದ್ರಪ್ಪಾ ಪಾಟೀಲ ಅವರು 4 ನಾಮಪತ್ರ ಸಲ್ಲಿಸಿದ್ದಾರೆ.
42-ಚಿಂಚೋಳಿ ವಿಧಾನಸಭಾ ಕ್ಷೇತ್ರ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸುಭಾಷ ವಿ. ರಾಠೋಡ ಹಾಗೂ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಅವಿನಾಶ ಉಮೇಶ ಜಾಧವ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.
43-ಗುಲಬರ್ಗಾ (ಗ್ರಾಮೀಣ) ವಿಧಾನಸಭಾ ಕ್ಷೇತ್ರ: ಸೋಶಿಯಾಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ಗಣಪತರಾವ್ ಕೆ. ಮಾನೆ ಅವರು 2 ನಾಮಪತ್ರ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ರಾಘವೇಂದ್ರ ಚಿಂಚನಸೂರ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.
44-ಗುಲಬರ್ಗಾ (ದಕ್ಷಿಣ) ವಿಧಾನಸಭಾ ಕ್ಷೇತ್ರ: ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಶೇಷಗಿರಿ ಪ್ರಲ್ಹಾದರಾವ್ ಕುಲಕರ್ಣಿ 1 ನಾಮಪತ್ರ, ಸ್ವತಂತ್ರ ಅಭ್ಯರ್ಥಿಯಾಗಿ ನಾಗೀಂದ್ರಪ್ಪ ಅಂಬಾರಾಯ ಪೂಜಾರಿ-1 ನಾಮಪತ್ರ, ಭಾರತೀಯ ಜನತಾ ಪಕ್ಷದಿಂದ ದತ್ತಾತ್ರೇಯ ಚಂದ್ರಶೇಖರ-2 ನಾಮಪತ್ರ, ಎಸ್.ಯು.ಸಿ.ಐ. (ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ-ಕಮ್ಯೂನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ಮಹೇಶ ಸುಬ್ಬರಾವ್-1 ನಾಮಪತ್ರ, ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಲಕ್ಷö್ಮಣರಾವ ರಾಮಣ್ಣ ಭೋಸಲೆ-1ನಾಮಪತ್ರ ಸಲ್ಲಿಸಿದ್ದಾರೆ.
45-ಗುಲಬರ್ಗಾ (ಉತ್ತರ) ವಿಧಾನಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಚಂದ್ರಕಾAತ ಬಿ. ಪಾಟೀಲ (ಚಂದು ಪಾಟೀಲ), ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕನೀಜ್ ಫಾತೀಮಾ ಹಾಗೂ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸೈಯದ್ ಸಜ್ಜಾದ ಅಲಿ ಹಾಗೂ ಆಲ್ ಇಂಡಿಯಾ ಮಜಲೀಸ್-ಇ-ಇನ್‌ಕಿಲಾಬ್-ಎ-ಮಿಲ್ಲತ್ ಪಕ್ಷದ ಅಭ್ಯರ್ಥಿಯಾಗಿ ಮಹ್ಮದ್ ಅಶರಫ್ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.
46-ಆಳಂದ ವಿಧಾನಸಭಾ ಕ್ಷೇತ್ರ: ಸ್ವತಂತ್ರ ಅಭ್ಯರ್ಥಿಯಾಗಿ ರತ್ನಪ್ಪ ರಾಮಚಂದ್ರಪ್ಪ-1 ನಾಮಪತ್ರ, ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಭೋಜರಾಜ್ ರಾಮಚಂದ್ರ ಪಾಟೀಲ 1 ನಾಮಪತ್ರ, ಸ್ವತಂತ್ರ ಅಭ್ಯರ್ಥಿಯಾಗಿ ರಮೇಶ ಈಶ್ವರಪ್ಪ 1 ನಾಮಪತ್ರ ಹಾಗೂ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಸುಭಾಷ ಗುತ್ತೇದಾರ್ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಯ ಆರಂಭ ದಿನದಿಂದ ಇಲ್ಲಿಯವರೆಗೆ ಒಟ್ಟಾರೆ 40 ಅಭ್ಯರ್ಥಿಗಳಿಂದ 51 ನಾಮಪತ್ರ ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ.

LEAVE A REPLY

Please enter your comment!
Please enter your name here