ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗಳಿಗೆನಿರ್ಬಂಧ :ಜಿಲ್ಲಾಧಿಕಾರಿ ಯಶ್ವಂತ ಗುರಕರ್

0
613

ಕಲಬುರಗಿ,ಮೇ.5:ಕರ್ನಾಟಕ ವಿಧಾನಸಭಾ ಚುನಾವಾಣೆಗೆ ಮೇ-10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ (ಮೇ-8ರ ಸಾಯಂಕಾಲ 6 ಗಂಟೆಯಿAದ ಮೇ-10ರ ಸಾಯಂಕಾಲ 6.30 ಗಂಟೆ ವರೆಗೆ ಚುನಾವಣೆಗೆ ಸಂಬAಧಿಸಿದAತೆ ಮತದಾರರ ಮೇಲೆ ಪ್ರಭಾವ ಬೀರುವ ದೂದರ್ಶನದಲ್ಲಿ ಸಿನಿಮಾಟೋಗ್ರಾಫಿ, ಚರ್ಚೆ, ಸಂವಾದ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ, ಹೀಗೆ ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಲಿ ಅಥವಾ ಬಿತ್ತರಿಸುವುದನ್ನು ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 125ರಂತೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲೆ ಎಂ.ಸಿ.ಎA.ಸಿ. ಅಧ್ಯಕ್ಷ ಯಶವಂತ ವಿ. ಗುರುಕರ್ ತಿಳಿಸಿದ್ದಾರೆ.
ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸುದ್ದಿ ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 126ರ ಅನ್ವಯ 2 ವರ್ಷಗಳ ಶಿಕ್ಷೆ ಅಥವಾ ದಂಡ, ಇಲ್ಲವೆ ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಮತದಾನ ಪೂರ್ವ 48 ಗಂಟೆ ಅವಧಿಯಲ್ಲಿ ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮ ಸಂಸ್ಥೆಗಳು ಬಿತ್ತರಿಸುವ ಚುನಾವಣಾ ಸುದ್ದಿಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿರುವ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಪ್ಯಾನಲಿಸ್ಟ್ ಅಭಿಪ್ರಾಯಗಳು, ಮನವಿಗಳು ಇಲ್ಲದಿರುವುದುನ್ನು ಖಚಿತಪಡಿಸಿಕೊಳ್ಳಬೇಕು. ಇದಲ್ಲದೆ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶ ಪ್ರಕಟ, ವಿಶ್ಲೇಷಣೆ, ಪ್ರದರ್ಶನ ಮಾಡುವುದನ್ನು ಸಹ ನಿರ್ಬಂಧಿಸಲಾಗಿದೆ.
ಎಕ್ಸಿಟ್ ಪೋಲ್ ನಿಷೇಧ:
ಮತದಾನದ ಪೂರ್ವ 48 ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆ ವರೆಗೂ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿ.ವಿ. ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಎಲ್ಲಾ ಮಾಧ್ಯಮ ಸಂಸ್ಥೆಗಳು ಚುನಾವಣಾ ಆಯೋಗವು ಕಾಲ ಕಾಲಕ್ಕೆ ಹೊರಡಿಸುವ ಎಲ್ಲಾ ಮಾರ್ಗದರ್ಶನಗಳನ್ನು ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here