ಗಣಪತಿ ವಿಸರ್ಜನೆ ಹಿನ್ನೆಲೆ, 23ರಂದು ಮದ್ಯ ಮಾರಾಟ ನಿಷೇಧ

0
262

ಕಲಬುರಗಿ,ಸೆ.22:ಕಲಬುರಗಿ ಜಿಲ್ಲೆಯಾದ್ಯಂತ ಗಣೇಶ ಚತುರ್ಥಿ ನಿಮಿತ್ಯ ಪ್ರತಿಷ್ಠಾಪಿಸಲಾಗಿರುವ 5 ದಿನಗಳ ಅವಧಿಯ ಗಣಪತಿ ವಿಸರ್ಜನೆ ಅಂಗವಾಗಿ ನಾಳೆ ಶನಿವಾರ 23.09.2023 ರಿಂದ ಸೆ. 24ರ ಬೆಳಿಗ್ಗೆ 6.00 ಗಂಟೆ ವರೆಗೆ ಮದ್ಯ ಮಾರಾಟ ನೀಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಜಾರಿ ಮಾಡಿದ್ದಾರೆ.
ಸಂಪ್ರದಾಯದAತೆ ಸೆ.23 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ 1965ರ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರಂತೆ ಕಲಬುರಗಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಢಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.
ಈ ಅªಧಿಯಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯಪಾನ, ಸರಾಯಿ, ಶೇಂಧಿ, ಸ್ವದೇಶಿ ಹಾಗೂ ವಿದೇಶಿ ಮಧ್ಯಪಾನ ಮತ್ತು ಮಾದಕ ವಸ್ತುಗಳ ಮಾರಾಟ, ಸಾಗಾಟ ಹಾಗೂ ಮಧ್ಯಪಾಪವನ್ನು ನಿಷೇಧಿಸಿದಲ್ಲದೆ ಅಂಗಡಿಗಳನ್ನು ಮುಚ್ಚುವಂತೆ ಸಹ ಆದೇಶಿಸಲಾಗಿದೆ

LEAVE A REPLY

Please enter your comment!
Please enter your name here