ಹಲಕರ್ಟಿ ಬಳಿ ಭೀಕರ ಅಪಘಾತಒಂದೆ ಕುಟುಂಬದ ಆರು ಜನ ಸಾವು

0
1399

(ನಮ್ಮ ಪ್ರತಿನಿಧಿಯಿಂದ)
ಕಲಬುರಗಿ, ನ. 09: ಇಂದು ಗುರುವಾರ ಸಂಜೆ 6.30ರ ಸುಮಾರಿಗೆ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಟ್ಯಾಂಕರ್ ಮತ್ತು ಟಂಟo ವಾಹನದ ನಡುವೆ ಡಿಕ್ಕಿ ಸಂಭವಿಸಿ ಟಂಟoನಲ್ಲಿದ್ದ ಒಂದೇ ಕುಟುಂಬದ ಆರು ಜನ ಸಾವಿಗೀಡಾಗಿ ಓರ್ವನಿಗೆ ಗಂಭೀರ ಗಾಯಗಳಾದ ಬಗ್ಗೆ ವರದಿಯಾಗಿದೆ.
ಅಪಘಾತದ ಸ್ಥಳದಲ್ಲಿಯೇ ನಜ್ಮಾ ಬೇಗಂ (28), ಬಿಬಿ ಫಾತೀಮಾ (12) , ಅಬುಬಕರ್ (4) ಬಿಬಿ ಮರಿಯಮ್ಮ (5 ತಿಂಗಳು), ಮಹ್ಮದ್ ಪಾಶಾ (20), ಆಟೋ ಚಾಲಕ ಬಾಬಾ (35) ಅವರುಗಳು ಸಾವನ್ನಪ್ಪಿದದು, ಮಹಮದ್ ಹುಸೇನ್ ಎಂಬ ಬಾಲಕನಿಗೆ ಗಂಭಿರ ಗಾಯವಗಿದ್ದು, ಮೃತರು ಚಿತ್ತಾಪೂರ ತಾಲೂಕಿನ ನಾಲವಾರ ಗ್ರಾಮದ ನಿವಾಸಿಗಳಾಗಿದ್ದಾರೆ.
ನಾಲವಾರದಿಂದ ಟಂಟA ನಲ್ಲಿ ಆಧಾರ ಕಾರ್ಡ್ ತಿದ್ದುಪಡಿಗಾಗಿ ಚಿತ್ತಾಪುರಕ್ಕೆ ಹೋಗಿದ್ದ ಕುಟುಂಬ ಸದಸ್ಯರುಗಳು, ಆಧಾರ ಕಾರ್ಡ ತಿದ್ದುಪಡಿ ಮಾಡಿಸಿಕೊಂಡು ಬರುವಾಗ ಈ ದಾರುಣ ಘಟನೆ ನಡೆದು, ಆಧಾರದಲ್ಲಿನ ತಿದ್ದುಪಡಿಗಾಗಿ ಪ್ರಾಣವನ್ನೆ ಕಳೆದುಕೊಂಡAತಾಗಿದೆ.
ಎದುರುಗಡೆ ಬರುತ್ತಿದ್ದ ಬೂದಿ ತುಂಬಿದ ಟ್ಯಾಂಕರ್ ಟಂಟoಗೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದ ಬಳಿಕ ಟ್ಯಾಂಕರ್ ಚಾಲಕ ಟ್ಯಾಂಕರ್ ಬಿಟ್ಟು ಪರಾರಿಯಾಗಿದ್ದಾನೆ. ಈ ಬಗ್ಗೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಪ್ರಿಯಾಂಕ್ ಖರ್ಗೆ ಸಂತಾಪ
ಚಿತ್ತಾಪುರದ ಹಲಕರ್ಟಾ ಬಳಿ ಟ್ಯಾಂಕರ್ ಮತ್ತು ಟಂಟA ನಡುವೆ ನಡೆದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಸುದ್ದಿ ತಿಳಿದು ಅತೀವ ನೋವುಂಟಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಅಪಘಾತದಲ್ಲಿ ಮೃತಪಟ್ಟವರೆಲ್ಲ ನನ್ನ ಮತಕ್ಷೇತ್ರ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದವರಾಗಿದ್ದು, ಅವರ ಕುಟುಂಬ ವರ್ಗಕ್ಕೆ ಈ ಕಠಿಣ ಸಂದರ್ಭದಲ್ಲಿ ನನ್ನ ತೀವ್ರ ಸಂತಾಪಗಳನ್ನು ತಿಳಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here