ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಸುಸೂತ್ರವಾಗಿ ನಡೆಸಲು ಡಿಸಿ ಸೂಚನೆ

0
170

ಕಲಬುರಗಿ,ಮಾ.23:ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯು ನಾಳೆಯಿಂದ 25 ರಿಂದ ಏಪ್ರಿಲ್ 6 ರವರೆಗೆ ಕಲಬುರಗಿ ಜಿಲ್ಲೆಯ ಒಟ್ಟು 124 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಈ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 124 ಪರೀಕ್ಷಾ ಕೇಂದ್ರಗಳಿದ್ದು, ಇದರಲ್ಲಿ 25 ಸೂಕ್ಷ್ಮ ಮತ್ತು 8 ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳೆAದು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ 48,334 ವಿದ್ಯಾರ್ಥಿಗಳು ನೋಂದಾಯಿಸಿದ್ದು, 43,181 ರೆಗ್ಯುಲರ್ ವಿದ್ಯಾರ್ಥಿಗಳು, 1,705 ಖಾಸಗಿ ವಿದ್ಯಾರ್ಥಿಗಳು ಹಾಗೂ 3,448 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 48,334 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಜಿಲ್ಲೆಯ ಎಲ್ಲಾ 124 ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ. ಇಂಟರ್‌ನೆಟ್ ಸಹಿತ ವ್ಯವಸ್ಥೆ ಮಾಡಲಾಗಿದೆ. ತಾಲೂಕು ಹಾಗೂ ಜಿಲ್ಲಾ ಹಂತದಲ್ಲಿ ಸದರಿ ಕೇಂದ್ರಗಳ ಪರೀಕ್ಷಾ ನಿಗಾವಣೆಗಾಗಿ ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ. ತಾಲೂಕಾ ಹಂತದಲ್ಲಿ ಆಯಾ ಪರೀಕ್ಷಾ ಕೇಂದ್ರಗಳ ನಿಗಾವಣೆಯನ್ನು ಮಾಡಲು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಸರದಿ ಆಧಾರದ ಮೇರೆಗೆ ಸ್ಥಾನಿಕ ಜಾಗೃತ ದಳ ನಿಯೋಜನೆ ಮಾಡಲಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ಹೋಗಲು 49 ಮಾರ್ಗಗಳನ್ನು ರಚನೆ ಮಾಡಿ, ಪ್ರತಿ ಮಾರ್ಗಕ್ಕೆ ಒಬ್ಬರಂತೆ ಎಸ್ಮಾರ್ಟ್ ಸಹಿತವಾಗಿ ಮಾರ್ಗಾಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್: ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಕೇಂದ್ರ ಹಾಗೂ ಕಂಪೌAಡ್ ಗೋಡೆ ಇಲ್ಲದ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲು ವ್ಯವಸ್ಥೆ ಮಾಡಲಾಗಿದೆ.
ಈಗಾಗಲೇ ದಿನಾಂಕ:19-03-2024 ರಂದು ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾರ್ಗಾಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಪೂರ್ವಭಾವಿ ಸಭೆಯನ್ನು ಜರುಗಿಸಿ ಮಂಡಳಿ ಹೊರಡಿಸಿದ ಮಾರ್ಗಸೂಚಿಯಂತೆ ಅವರವರ ಕರ್ತವ್ಯ ಹಾಗೂ ಜವಾಬ್ದಾರಿಯನ್ನು ದಕ್ಷತೆಯಿಂದ ನಿರ್ವಹಿಸುವಂತೆ ನಿರ್ದೇಶನ ನೀಡಲಾಗಿದೆ.
ವಿದ್ಯಾರ್ಥಿಗಳು ಭಯಮುಕ್ತವಾಗಿ ಪರೀಕ್ಷೆ ಬರೆಯಲು ಪ್ರೇರೇಪಿಸಬೇಕು. ಪರೀಕ್ಷಾ ಪಾವಿತ್ರ‍್ಯತೆ ಕಾಪಾಡಲು ಸಂಬAಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here