ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಲು ಸೂಚನೆ

0
431

ಕಲಬುರಗಿ,ಮಾ.23:ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ನೀರಿನ ಮೂಲಗಳಾದ ಭೀಮಾ ನದಿ, ಹಾಗೂ ಬೆಣ್ಣೇತೋರಾ ನದಿಗಳಲ್ಲಿ ಪ್ರತಿದಿನ ನೀರಿನ ಮಟ್ಟ ಇಳಿಕೆಯಾಗುತ್ತಿದೆ.ಆದ್ದರಿಂದ ಹೋಳಿ ಹಬ್ಬದ ಸಂದರ್ಭದಲ್ಲಿ ನಗರದ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸುವುದರ ಜೊತೆಗೆ ಮಕ್ಕಳು ಹಾಗೂ ಹಿರಿಯರು ಚರ್ಮಕ್ಕೆ ಹಾನಿಕರವಲ್ಲದ ನೈಸರ್ಗಿಕ ಬಣ್ಣಗಳನ್ನು ಮಾತ್ರ ಉಪಯೋಗಿಸಬೇಕೆಂದು ಕಲಬುರಗಿ ಕೆಯುಡಬ್ಲೂö್ಯಎಸ್‌ಎಂಪಿ-ಕೆಯುಐಡಿಎಫ್‌ಸಿ ಯೋಜನಾ ಅನುಷ್ಠಾನ ಘಟಕದ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.
ಸಾರ್ವಜನಿಕರು ಅನಾವಶ್ಯಕವಾಗಿ ರಸ್ತೆ ಹಾಗೂ ವಾಹನ ತೊಳೆಯಬಾರದು. ನೀರು ಪೋಲಾಗದಂತೆ ನೋಡಿಕೊಳ್ಳಬೇಕು. ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲ ಮೂಲ ನದಿಯಾದ ಭೀಮಾ ಹಾಗೂ ಬೆಣ್ಣೆತೋರಾ ನದಿಯಿಂದ ನಿಂತ ನೀರು ಬರುತ್ತಿರುವುದರಿಂದ ನೀರನ್ನು ಶುದ್ಧೀಕರಿಸಿ, ಸೂಪರ್ ಕ್ಲೋರಿನೇಶನ್ ಮಾಡಿ ನೀರು ಸರಬರಾಜು ಮಾಡಲಾಗುತ್ತಿದೆ. ಆದಾಗ್ಯೂ ನಗರದ ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಕುಡಿಯುವ ನೀರನ್ನು ಕಾಯಿಸಿ, ಆರಿಸಿ ಮತ್ತು ಸೊಸಿ ಕುಡಿಯಬೇಕು.
ನಗರದ ಸಾರ್ವಜನಿಕರು ತಮ್ಮ ಮನೆಗಳಿಗೆ ತೆಗೆದುಕೊಂಡ ನಳದ ಜೋಡಣೆಗೆ ತೊಟ್ಟಿಯನ್ನು ಕಡ್ಡಾಯವಾಗಿ ಕೂಡಿಸಿಕೊಳ್ಳಬೇಕು. ನಳದ ತಗ್ಗುಗಳನ್ನು ಮುಚ್ಚಬೇಕು. ಏಕೆಂದರೆ ತಗ್ಗುಗಳಲ್ಲಿ ಕಲುಷಿತ ನೀರು ಸಂಗ್ರಹಣೆಯಾಗಿ ಅದೇ ನೀರು ಮತ್ತೆ ನಳದ ತೊಟ್ಟಿಯಲ್ಲಿ ಸೇರುವ ಮೂಲಕ ಮುಂದಿನ ಗ್ರಾಹಕರಿಗೆ ಕಲುಷಿತ ನೀರು ಬರುತ್ತದೆ. ಇದರಿಂದ ಸಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇರುತ್ತದೆ.
ಆದ್ದರಿಂದ ಸಾರ್ವಜನಿಕರು ಕಲಬುರಗಿ ಮಹಾನಗರ ಪಾಲಿಕೆ, ಕೆಯುಐಡಿಎಫ್‌ಸಿ ಹಾಗೂ ಮೆ|| ಎಲ್ ಆಂಡ್ ಟಿ ಲಿಮಿಟೆಡ್ ರವರೊಂದಿಗೆ ಸಹಕರಿಸಬೇಕು. ನೀರಿನ ಸಮಸ್ಯೆಗಳ ಬಗ್ಗೆ ದೂರು ದಾಖಲಿಸಲು ಗ್ರಾಹಕರ ಸೇವಾ ಕೇಂದ್ರಕ್ಕೆ ಅಥವಾ ದೂರವಾಣಿ ಸಂಖ್ಯೆ: +91 1800 425 8247 (ಛಿಛಿಛಿ) ಗೆ ಸಂಪರ್ಕಿಸಬೇಕೆAದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here