ಮೊದಲನೇ ದಿನದಂದು ಮೂವರು ಅಭ್ಯರ್ಥಿಗಳಿಂದ ಐದು ನಾಮಪತ್ರಗಳು ಸಲ್ಲಿಕೆ

0
664

ಕಲಬುರಗಿ,ಏ.12:ಗುಲಬರ್ಗಾ ಲೋಕಸಭಾ (ಪ.ಜಾ ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೊದಲನೇ ದಿನವಾದ ಶುಕ್ರವಾರದಂದು ಮೂವರು ಅಭ್ಯರ್ಥಿಗಳಿಂದ ಐದು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಧಾಕೃಷ್ಣ ದೊಡ್ಡಮನಿ ಅವರು 3 ನಾಮಪತ್ರ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಉಮೇಶ ಗೋಪಾಲದೇವ ಮತ್ತು ಭಾರತೀಯ ಜನ ಸಾಮ್ರಾಟ್ ಪಾರ್ಟಿಯ ಅಭ್ಯರ್ಥಿಯಾಗಿ ತಾರಾಬಾಯಿ ಬೋವಿ ಅವರು ತಲಾ 1 ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಏಪ್ರಿಲ್ 19 ರಂದು ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಏಪ್ರಿಲ್ 22 ಕೊನೆ ದಿನವಾಗಿರುತ್ತದೆ.

LEAVE A REPLY

Please enter your comment!
Please enter your name here