ಬೆಂಗಳೂರು:ಜೂ.6 ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬAಧಿಸಿದAತೆ ಸಚಿವ ಬಿ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ .
ನಾನು ನಿರಪರಾಧಿಯಾಗಿದ್ದುಯಾವುದೇ ಒತ್ತಡಗಳಿಗೆ ಒಳಗಾಗದೇ ಸ್ವಯಂ ಪ್ರೇರಿತನಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ನಾಗೇಂದ್ರ ತಿಳಿಸಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಂದು ಸಂಜೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದವರು ಕಾಂಗ್ರೆಸ್ ಮೇಲೆ ಕೆಸೆರೆರಚಾಟ ಮಾಡುತ್ತಿದ್ದಾರೆ. ಆದರೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ಕೊಡುತ್ತಿದ್ದೇನೆ. ಆತ್ಮಸಾಕ್ಷಿಯಿಂದ ಯಾವುದೇ ಒತ್ತಡ ಇಲ್ಲದೆ ರಾಜೀನಾಮೆ ನೀಡುತ್ತಿದ್ದೇನೆ. ಸಿಎಂ ಜೊತೆ ಚರ್ಚಿಸಿದಾಗ ನನ್ನ ಮೇಲೆ ಯಾವುದೇ ಒತ್ತಡ ಹಾಕಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದರು.
ಯಾರಿಗೂ ಕೂಡ ಮುಜುಗರ ಆಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ, ಸಿಎಂ ಆಡಳಿತವನ್ನು ಅದ್ಭುತವಾಗಿ ನಡೆಸುತ್ತಿದ್ದಾರೆ. ಈ ಪ್ರಕರಣವನ್ನು ಎಸ್ ಐಟಿ ತನಿಖೆ ನಡೆಸುತ್ತಿದೆ. ತನಿಖೆ ನಡೆಯುವಾಗ ನಾನು ಮಂತ್ರಿ ಸ್ಥಾನದಲ್ಲಿದ್ದರೆ ಸಮಸ್ಯೆ ಆಗುತ್ತೆ ಎಂಬ ಕಾರಣಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಬಿ ನಾಗೇಂದ್ರ ಸ್ಪಷ್ಟಪಡಿಸಿದರು.
ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಡೆತ್‌ನೋಟ್‌ನಲ್ಲಿ ನನ್ನ ಹೆಸರನ್ನು ಉಲ್ಲೇಖ ಮಾಡಿಲ್ಲ. ಎಸ್‌ಐಟಿ ತನಿಖೆಯಲ್ಲಿ ಸತ್ಯಾಂಶ ಹೊರಬಂದ ಮೇಲೆ ಮತ್ತೆ ಸಚಿವನಾಗುತ್ತೇನೆ ಎಂದು ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಈ ಮುಂಚೆ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಕೂಡ ಕೋಟಾ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ ಮೇಲೂ ಆರೋಪ ಮಾಡಿದ್ದರು. ಈ ಬಗ್ಗೆ ಸಿಎಂ ಕ್ರಮ ಕೈಗೊಳ್ಳುತ್ತಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ನನಗೆ ರಾಜೀನಾಮೆ ಕೊಡುವುದು ಬೇಡ ಅಂದಿದ್ದಾರೆ. ಇವರ್ಯಾರು ನನ್ನ ಮೇಲೆ ಯಾವುದೇ ಒತ್ತಡ ಹಾಕಿಲ್ಲ ಎಂದು ಹೇಳಿದರು.
ಕಳೆದ 10 ದಿನದಿಂದ ಮಾಧ್ಯಮಗಳಲ್ಲಿ ವರದಿ ಬರುತ್ತಿತ್ತು. ಜನರು ಆತಂಕಗೊAಡಿದ್ದರು. ವಿಪಕ್ಷಗಳು 10 ದಿನದಿಂದ ಆರೋಪಿಸುತ್ತಿದ್ದರು. ನಾನು ನನ್ನ ಸ್ವ-ನಿರ್ಧಾರದಿಂದ ರಾಜೀನಾಮೆ ಕೊಡುತ್ತಿದ್ದೇನೆ. ಸ್ವ-ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದರು .
ಸಚಿವ ಬಿ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸುವ ಎಚ್ಚರಿಕೆ ನೀಡಿತ್ತು ಹಾಗೆಯೇ ಇಂದು ರಾಜ ಭವನ ಚಲೋ ನಡೆಸಿ ಸಚಿವ ನಾಗೇಂದ್ರ ಅವರನ್ನ ವಜಾ ಮಾಡುವಂತೆ ಬಿಜೆಪಿ ರಾಜ್ಯಪಾಲರಿಗೆ ಮನವಿಯು ಮಾಡಿತ್ತು.