ಕಲಬುರಗಿ,ಆ.22: ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಲಬುರಗಿಯ ನಿವಾಸಿ ನಿವೃತ್ತ ಶಿಕ್ಷಕ ಸೋಮಶೇಖರ ಎಂ. ಚಿನಮಳ್ಳಿ ಅವರು ಬುಧವಾರ ಗುರುವಾರ ನಸುಕಿನ ಜಾವ 3 ಗಂಟೆಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಪತ್ನಿ, ವಾರ್ತಾ ಇಲಾಖೆಯ ಉಮಾಶಂಕರ ಚಿನಮಳ್ಳಿ ಸೇರಿದಂತೆ ಮೂವರು ಪುತ್ರರು ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಗುರುವಾರ ಕಲಬುರಗಿ ನಗರದ ಗಂಜ್ ಪ್ರದೇಶದ ಶಿವಮುಕ್ತ ಧಾಮದಲ್ಲಿ ಇಂದು ಸಂಜೆ 4.30 ಗಂಟೆಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.