ಮೊಹರಂ ಹಬ್ಬ ಆಚರಣೆ ಪ್ರಯುಕ್ತ ಇಂದು ರಾತ್ರಿಯಿಂದ ಜು. 8ರ ವರೆಗೆ ಮದ್ಯ ಮಾರಾಟ ನಿಷೇಧ

0
125

ಕಲಬುರಗಿ,ಜು.05:ಮೊಹರಂ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ಕಲಬುರಗಿ ಜಿಲ್ಲೆಯಾದ್ಯಂತ (ಕಲಬುರಗಿ ನಗರ ಹೊರತುಪಡಿಸಿ) 2025ರ ಜುಲೈ 5ರ ರಾತ್ರಿ 11 ಗಂಟೆಯಿAದ ಜುಲೈ 8ರ ಬೆಳಗಿನ 6 ಗಂಟೆಯವರೆಗೆ ಎಲ್ಲಾ ತರಹದ ಮದ್ಯ ಮಾರಾಟ, ಸಾಗಾಟ ಹಾಗೂ ಮದ್ಯಪಾನವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಕಲಬುರಗಿ ಜಿಲ್ಲೆಯಾದ್ಯಂತ (ಕಲಬುರಗಿ ನಗರ ಹೊರತುಪಡಿಸಿ) ಎಲ್ಲಾ ತರಹದ ಮದ್ಯಪಾನ, ಸರಾಯಿ, ಶೆಂಧಿ, ಸ್ವದೇಶಿ ಹಾಗೂ ವಿದೇಶಿ ಮದ್ಯಪಾನ ಮತ್ತು ಮಾದಕ ವಸ್ತುಗಳ ಮಾರಾಟ, ಸಾಗಾಟ ಹಾಗೂ ಮದ್ಯಮಾನವನ್ನು ನಿಷೇಧಿಸಿ, ಮದ್ಯದ ಅಂಗಡಿ ಹಾಗೂ ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ ಅವರು ಆದೇಶ ಹೊರಡಿಸಿದ್ದಾರೆ.
ಈ ಮೊಹರಂ ಹಬ್ಬದ ಆಚರಣೆ ಸಂದರ್ಭದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here