ಕಲಬುರಗಿ: ಇಂದು ಕೆಕೆಆರ್‌ಡಿಬಿ ಅಧ್ಯಕ್ಷ ಹಾಗೂ ಶಾಸಕ ಡಾ. ಅಜಯಸಿಂಗ್ ಅವರು ಕೆಲವು ದಿನಗಳ ಹಿಂದೆ ಉಸಿರಾಟದ ಸೋಂಕಿನ ದೂರುಗಳಿಂದಾಗಿ ಆಸ್ಪತ್ರೆಗೆÀ ದಾಖಲಾದ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಆರೋಗ್ಯ ವಿಚಾರಿಸಿದರು.
ಚಿರಾಯು ಆಸ್ಪತ್ರೆಗೆ ತೆರಳಿದ ಅಧ್ಯಕ್ಷರು ಡಾ. ಅಪ್ಪಾ ಅವರ ಆರೋಗ್ಯದ ಕುರಿತು ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಡಾ. ಅಪ್ಪಾಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು, ಆರೋಗ್ಯ ಸಾಮಾನ್ಯ ಸ್ಥಿತಿಗೆ ಮರಳುತ್ತಿರುವುದರಿಂದ ಅವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಅವರನ್ನು ಪರೀಕ್ಷಿಸಿದ ವೈದ್ಯರು ಈ ಸಂದರ್ಭದಲ್ಲಿ ಡಾ. ಅಜಯಸಿಂಗ್ ಅವರಿಗೆ ತಿಳಿಸಿದ್ದಾರೆ.