ಲಬುರ್ಗಿ, ಸೆ. 17: ಕಲ್ಯಾಣ ಕರ್ನಾಟಕ ಭಾಗದಲ್ಲಿ 50 ಸಾವಿರ ನಿವೇಶನ ಹಂಚಿಕೆ, 30 ಎಕರೆ ಪ್ರದೇಶದಲ್ಲಿ ಐಟಿ ಪಾರ್ಕ್ ಅಭಿವೃದ್ಧಿ, ಕೀಡೆಗೆ ಪ್ರೋತ್ಸಾಹ ನೀಡಲು ಹಡಗಿಲ ಹಾರುತಿ ಗ್ರಾಮದಲ್ಲಿ ಕ್ರೀಡಾ ನಗರ ಸ್ಥಾಪನೆ, ಕೋಟಿ ವೃಕ್ಷ ಅಭಿಯಾನ ಸೇರಿದಂತೆ 10 ಹೊಸ ಕಾರ್ಯಕ್ರಮಗಳನ್ನು ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು.
ಕಲಬುರ್ಗಿಯಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಗುರುವಾರ ಧ್ವಜಾರೋಹಣ ನೆರವೇರಿಸಿದರು.
“ಕಲ್ಯಾಣ ಕರ್ನಾಟಕ ಭಾಗದಲ್ಲಿ ಗಂಭೀರ ಸಮಸ್ಯೆಯಾದ ರಕ್ತಹೀನತೆ ಆರೋಗ್ಯ ತಡೆ ಯೋಜನೆ, ಅಪರಾಧ ತಡೆ, ಸಂಚಾರ ನಿಯಂತ್ರಣ ಕ್ಕೆ ಎಐ ಆಧಾರಿತ ಸಿಸಿಟಿವಿ ಕ್ಯಾಮೆರಾ, ಸೇಡಂ ರಸ್ತೆಯ ರಿಂಗ್ ರೋಡ್‌ನಲ್ಲಿ ಮೇಲ್ಸೇತುವೆ ನಿರ್ಮಾಣ, ಹೊಸ ಪೆರಿಫೆರಲ್ ರಿಂಗ್ ರಸ್ತೆಗೆ ಯೋಜನಾ ವರದಿ, ಸ್ಟಾರ್ಟ್ಅಪ್‌ಗಳು ಮತ್ತು ಯುವ ಉದ್ಯಮಿಗಳನ್ನು ಉತ್ತೇಜಿಸಲು ಕ್ರಿಯಾ ಸ್ಥಾಪನೆ, ಕಲ್ಯಾಣ ಕರ್ನಾಟಕ ಎಕಾನಮಿ ಮಿಷನ್ ಸ್ಥಾಪನೆ, ಜೈವಿಕ ಆರ್ಥಿಕ ಮಿಷನ್, 50 ಕೋಟಿ ವೆಚ್ಚದಲ್ಲಿ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಈ ಹೊಸ ಘೋಷಣೆಗಳಲ್ಲಿ ಒಳಗೊಂಡಿದೆ” ಎಂದರು.
ಬೆAಗಳೂರು ಕರ್ನಾಟಕದ ಕಿರೀಟ. ಕಲ್ಯಾಣ ಕರ್ನಾಟಕ ಶಕ್ತಿಪೀಠ. ಕಲ್ಯಾಣ ಕರ್ನಾಟಕದ ಕಲ್ಯಾಣವೇ ನಮ್ಮ ಆದ್ಯತೆ. ಕಲ್ಯಾಣ ಕರ್ನಾಟಕದಲ್ಲಿ ತುಂಗಭದ್ರಾ, ಕೃಷ್ಣೆಯಂತೆ ಅಭಿವೃದ್ದಿ ತುಂಬಿ ಹರಿಯುತ್ತಿದೆ. ಈ ಭಾಗದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರತಿವರ್ಷ 5 ಸಾವಿರ ಕೋಟಿ ನೀಡಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಿಂದ ಸಮಗ್ರ ಕರ್ನಾಟಕದ ಪ್ರಗತಿ ಎಂದು ಹೇಳಿದರು.

371 ಜೆ ಜಾರಿಯಾದ ನಂತರ ಅದರಲ್ಲಿ 79,383 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ. ಹೊಸದಾಗಿ ಭರ್ತಿ ಮಾಡುತ್ತಿರುವ 72 ಸಾವಿರ ಹುದ್ದೆಗಳಲ್ಲಿ 32 ಸಾವಿರ ಹುದ್ದೆಗಳು ಈ ಭಾಗದ ಯುವಜನರಿಗೆ ದೊರೆಯಲಿವೆ. ಕೆಕೆಆರ್‌ಡಿಬಿಗೆ 2013-14ನೆuಟಿಜeಜಿiಟಿeಜ ರಿಂದ 2025-26ನೆuಟಿಜeಜಿiಟಿeಜ ಸಾಲಿನವರೆಗೆ 24,780 ಕೋಟಿ ಅನುದಾನ ನೀಡಲಾಗಿದೆ. ಇದರಲ್ಲಿ 14,000 ಕೋಟಿ ರೂ.ಅನುದಾನ ಖರ್ಚು ಮಾಡಲಾಗಿದೆ. 41,103 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 32,985 ಕಾಮಗಾರಿಗಳು ಪೂರ್ಣಗೊಂಡಿವೆ. 8,118 ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ” ಎಂದರು.
ನಮ್ಮೊAದಿಗೆ ನೀವು, ನಿಮ್ಮೊಂದಿಗೆ ನಾವು ಸೇರಿ ಮುನ್ನಡೆಯುವುದೇ ಅಭಿವೃದ್ಧಿ. ಬಸವಣ್ಣನವರ ಹೋರಾಟದ ನೆಲ. ಸಮಾನತೆ, ಮಾನವೀಯತೆ, ಸಹಬಾಳ್ವೆಯ ಸಂದೇಶ ನೀಡಿದ ಪುಣ್ಯಭೂಮಿ ಕಲ್ಯಾಣ ಕರ್ನಾಟಕ. ಆಗ ಬಾ, ಈಗ ಬಾ, ಹೋಗಿ ಬಾ ಎನ್ನದೇ, ಈಗಲೇ ಕೊಡುವುದೇ ಮಾನವಧರ್ಮ ಎಂದು ವಚನಕಾರ ಸರ್ವಜ್ಞ ಹೇಳಿದ್ದಾರೆ. ನೀರಿನಿಂದ ಸ್ನಾನ ಮಾಡಿದವನು ಬಟ್ಟೆ ಬದಲಾಯಿಸುತ್ತಾನೆ.ಬೆವರಿನಿಂದ ಸ್ನಾನ ಮಾಡಿದವನು ಇತಿಹಾಸ ನಿರ್ಮಿಸುತ್ತಾನೆ ಎಂದು ಸಂತ ಸೇವಾಲಾಲ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಕಲ್ಯಾಣ ಕರ್ನಾಟಕದ ವಿಮೋಚನೆಗೆ ರಕ್ತ, ಬೆವರು ಹರಿಸಿದೆ ಎಂದರು.
ಇಡುವ ಹೆಜ್ಜೆ ಚಿಕ್ಕದಿರಬಹುದು. ಆದರೆ ಆಲೋಚನೆ ದೊಡ್ಡದಿರಬೇಕು. ಸರ್ದಾರ್ ವಲ್ಲಭಾಯಿ ಪಟೇಲ್, ನೆಹರು ಅವರು ಕಲ್ಯಾಣ ಕರ್ನಾಟಕವನ್ನ ಕಾಪಾಡಿದರು. ಕಟ್ಟಡಗಳ ನಿರ್ಮಾಣದ ಜೊತೆಗೆ ಕಟ್ಟ ಕಡೆಯ ವ್ಯಕ್ತಿಯ ನೆಮ್ಮದಿ ಬದುಕೇ ಅಭಿವೃದ್ಧಿ ಈ ನಿಟ್ಟಿನಲ್ಲಿ ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಈ ಭಾಗದ ಅಭಿವೃದ್ಧಿಗೆ ಮುನ್ನುಡಿ ಬರೆದರು. 1990 ರಲ್ಲಿ ಮಾಜಿ ಸಿಎಂ ಧರ್ಮಸಿಂಗ್ ಅವರ ನೇತೃತ್ವದಲ್ಲಿ ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪನೆಯಾಯಿತು. ಹೀಗೆ ಪ್ರಾರಂಭವಾದ ಅಭಿವೃದ್ಧಿ ಪರ್ವ ಮುಂದುವರೆಯುತ್ತಿದೆ ಎಂದರು.

ಈ ಭಾಗದ ರಸ್ತೆಗಳ ಸುಧಾರಣೆಗೆ ಕಲ್ಯಾಣಪಥ ಯೋಜನೆ ರೂಪಿಸಿದ್ದೇವೆ. 38 ವಿಧಾನಸಭಾ ಕ್ಷೇತ್ರಗಳಲ್ಲಿ 1,150 ಕಿ.ಮೀ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 1 ಸಾವಿರ ಕೋಟಿ ನೀಡಲಾಗಿದೆ. ಪ್ರತಿ ಕ್ಷೇತ್ರಕ್ಕೆ 120 ಕೋಟಿ ತೆಗೆದಿರಿಸಿದ್ದೇವೆ. ಕಲಬುರಗಿಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ 11,770 ಕೋಟಿ ಮೊತ್ತದ ಬೃಹತ್ ಯೋಜನೆಗಳಿಗೆ ನಿರ್ಧಾರ ಮಾಡಿದ್ದೇವೆ ಎಂದರು.
350 ಕೆಪಿಎಸ್ ಶಾಲೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. 371 ಜೆ ಕಾರಣಕ್ಕೆ ವೈದ್ಯಕೀಯ ಕ್ಷೇತ್ರದಲ್ಲಿ 10,000ಕ್ಕೂ ಹೆಚ್ಚು ಹಾಗೂ ಎಂಜಿನಿಯರಿAಗ್‌ನಲ್ಲಿ 31,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರವೇಶ ದೊರಕಿದೆ. ಆರೋಗ್ಯ ಕ್ಷೇತ್ರಕ್ಕೆ 1,797 ಕೋಟಿ ರೂ., ಸಣ್ಣ ಕೈಗಾರಿಕೆಗಳಿಗೆ 200 ಕೋಟಿ ರೂ. ನೀಡಲಾಗಿದೆ. ಕಲಬುರಗಿಯಲ್ಲಿ 120 ಕ್ಕೂ ಹೆಚ್ಚು ಸ್ಟಾರ್ಟ್ಅಪ್‌ಗಳು ಸ್ಥಾಪನೆಯಾಗಿವೆ. 2030ರ ವೇಳೆಗೆ 500ಕ್ಕೂ ಹೆಚ್ಚು ಸ್ಟಾರ್ಟ್ಅಪ್‌ಗಳ ಗುರಿ ಹೊಂದಿದೆ” ಎಂದು ಹೇಳಿದರು.
ಶಕ್ತಿ ಯೋಜನೆಯಡಿ ಮಹಿಳೆಯರು 117.6 ಕೋಟಿ ಟ್ರಿಪ್ ಉಚಿತ ಪ್ರಯಾಣ ಮಾಡಿದ್ದು ಇದಕ್ಕಾಗಿ 4,287 ಕೋಟಿ ವೆಚ್ಚ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 21.42 ಲಕ್ಷ ಗ್ರಾಹಕರು ಉಚಿತ ವಿದ್ಯುತ್ ಸೌಲಭ್ಯ 2,328 ಕೋಟಿ ವಿನಿಯೋಗ. ಗೃಹಲಕ್ಷ್ಮಿ ಯೋಜನೆಯಡಿ 24.78 ಲಕ್ಷ ಮಹಿಳೆಯರಿಗೆ 9,650 ಕೋಟಿ ವಿತರಿಸಲಾಗಿದೆ. ಯುವನಿಧಿ ಯೋಜನೆಗೆ 172 ಕೋಟಿ ವೆಚ್ಚ ಮಾಡಲಾಗಿದೆ. 7,200 ಕೋಟಿ ಅಂದಾಜು ವೆಚ್ಚದಲ್ಲಿ ಕಲ್ಯಾಣ ಕರ್ನಾಟಕದ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿz ಎಂದು ಹೇಳಿದರು.

“ಎಲ್ಲರೂ ಒಟ್ಟಾಗಿ ನಡೆಯೋಣ. ನವ ಕರ್ನಾಟಕ ಸದೃಡ ಕರ್ನಾಟಕ ನಮ್ಮ ಸಂಕಲ್ಪ. ಅಭಿವೃದ್ಧಿ ಪರವಾದ ಗ್ಯಾರಂಟಿಗೆಯನ್ನು ನಮ್ಮ ಸರ್ಕಾರ ನೀಡಿದೆ, ನೀಡಲಿದೆ” ಎಂದು ಹೇಳಿದರು.
ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಎಂ ಖರ್ಗೆ, ಮಧ್ಯಮ ಕೈಗಾರಿಕೆಗಳ ಸಚಿವರಾದ ಡಾ. ಅಜಯಸಿಂಗ್ ದರ್ಮಸಿಂಗ್, ಸಂಸದ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ, ಶಾಸಕರುಗಳಾದ ಅಲ್ಲಂಪ್ರಭು ಪಾಟೀಲ್, ಖನೀಜ್ ಫಾತೀಮಾ, ಬಿ. ಆರ್. ಪಾಟೀಲ್, ಎಂ. ವೈ. ಪಾಟೀಲ್, ವಿಧಾನ ಪರಿಷತ್ ಸದಸ್ಯರುಗಳಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಜೇಸ್ಕಾಂ ಅಧ್ಯಕ್ಷ ಪ್ರವೀಣ ಹರವಾಳ, ಜಿಡಿಎ ಚೇರಮನ್ ಮಜರ ಆಲಂ ಖಾನ್, ಎನ್‌ಇಕೆಆರ್‌ಟಿಸಿ ಅಧ್ಯಕ್ಷರಾದ ಅರುಣಕುಮಾರ ಪಾಟೀಲ್, ಮಾಜಿ ಶಾಸಕ ರೇವುನಾಯಕ ಬೆಳಮಗಿ, ಮಾಜಿ ಮೇಯರ್ ಶರಣಕುಮಾರ ಮೋದಿ, ಕಾಂಗೈ ಯುವ ನಾಯಕರುಗಳಾದ ಫರಾಜ್ ಖಮರುಲ್ ಇಸ್ಲಾಂ, ರಾಜೇಶ ಜಗದೇವ ಗುತ್ತೇದಾರ, ನಗರ ಪೋಲಿಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ., ಜಿಲ್ಲಾಧಿಕಾರಿಗಳ ಅಕ್ರಮ ಪಾಶಾ, ಮಹಾನಗರಪಾಲಿಕೆ ಆಯುಕ್ತರಾದ ಅವಿನಾಶ ಶಿಂದೆ, ಪ್ರಾದೇಶಿಕ ಆಯುಕ್ತರು, ಸೇರಿದಂತೆ ಇನ್ನು ಹಲವಾರು ರಾಜಕೀಯ ನಾಯಕರು, ಅಧಿಕಾರಿಗಳು ಉಪಸ್ಥಿತರಿದ್ದರು.






