ಕಲಬುರಗಿ,ಫೆ.9:ಕಲ್ಯಾಣ ರ‍್ನಾಟಕ ಪ್ರದೇಶದಲ್ಲಿ ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕ.ಕ.ಪ್ರದೇಶದ 200 ಕಡೆ ಕೆ.ಪಿ.ಎಸ್. ಮಾದರಿಯ ರ‍್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆಗೆ ಚಿಂತನೆ ನಡೆದಿದೆ ಎಂದು ಕಲ್ಯಾಣ ರ‍್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು.
ರವಿವಾರ ಇಲ್ಲಿನ ಮಂಡಳಿ ಸಭಾಂಗಣದಲ್ಲಿ ಮಂಡಳಿಯ ಪ್ರಗತಿ ಕರ‍್ಯ ವಿವರಿಸಲು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ 2025-26ರ ಆಯವ್ಯದಯಲ್ಲಿ ಈ ಬಗ್ಗೆ ಘೋಷಣೆಯಾಗಲಿದೆ. ಸಿ.ಎಸ್.ಆರ್. ನಿಧಿ ಬಳಸಿಕೊಂಡು ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 4-5 ಶಾಲೆಗಳನ್ನು ತಲಾ 5 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದು, ಮರ‍್ಚ್ ನಂತರ ನಡೆಯುವ ಮಂಡಳಿ ಸಭೆಯಲ್ಲಿ ಇದರ ಬಗ್ಗೆ ಅಂತಿಮ ನರ‍್ಣಯ ಕೈಗೊಳ್ಳಲಾಗುವುದು. ನಗರವಾಸಿ ಮಕ್ಕಳಂತೆ ಹಳ್ಳಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬುದು ನಮ್ಮ ಉದ್ದೇಶವಾಗಿದೆ ಎಂದರು.
ಕಳೆದ ರ‍್ಷ ದಾಖಲೆ ಪ್ರಮಾಣದಲ್ಲಿ ರಾಜ್ಯ ರ‍್ಕಾರವು ಮಂಡಳಿಗೆ 5,000 ಕೋಟಿ ರೂ. ಅನುದಾನ ಹಂಚಿಕೆ ಮಾಡಿದ್ದು, ಅದರಲ್ಲಿ ಇದೂವರೆಗೆ 4,500 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಅನುಮತಿ ಸಿಕ್ಕಿದೆ. ಈ ರ‍್ಷ ಸಹ 5,000 ಕೋಟಿ ರೂ. ಘೋಷಣೆಗೆ ಇತ್ತೀಚೆಗೆ ಆಯವ್ಯಯಕ್ಕೆ ಪರ‍್ವಭಾವಿಯಾಗಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಲ್ಲಿ ವಿನಂತಿ ಮಾಡಿಕೊಂಡಿದ್ದು, ಅಷ್ಟು ಹಣ ಘೋಷಿಸುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದರು.
ಮಂಡಳಿಗೆ ನೀಡಲಾಗುವ ಹಣ ಸಂಪರ‍್ಣವಾಗಿ ರ‍್ಚು ಮಾಡಲು ಪ್ರತ್ಯೇಕ 229 ಇಂಜಿನೀಯರ್ ಒಳಗೊಂಡ ಇಂಜಿನೀಯರಿಂಗ್ ವಿಂಗ್ ಸ್ಥಾಪನೆ ಕುರಿತು ಸಿ.ಎಂ. ಜೊತೆ ರ‍್ಚಿಸಲಾಗಿದೆ. ಇದಲ್ಲದೆ ಮಂಡಳಿಯಲ್ಲಿನ ಖಾಲಿ ಹುದ್ದೆಗಳ ರ‍್ತಿಗೂ ಕ್ರಮ ವಹಿಸಲಾಗುವುದು ಎಂದು ಪತ್ರರ‍್ತರ ಪ್ರಶ್ನೆಗೆ ಉತ್ತರಿಸಿದ ಡಾ.ಅಜಯ್ ಸಿಂಗ್ ಅವರು, ರಾಜ್ಯದಲ್ಲಿ ಪ್ರಾದೇಶಿಕ ಅಸಮಾನತೆ ನಿವಾರಣೆ ನಿಟ್ಟಿನಲ್ಲಿ ರ‍್ಥಿಕ ತಜ್ಞ ಪ್ರೊ.ಗೋವಿಂದರಾವ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿದ್ದರಿಂದ, ಅವರೊಂದಿಗೂ ಪ್ರದೇಶದ ಅಭಿವೃದ್ಧಿ ಕುರಿತಂತೆ ಸಮಾಲೋಚನೆ ಮಾಡಲಾಗಿದೆ ಎಂದರು.
ಕಳೆದ ಸೆಪ್ಟೆಂಬರ್ 17 ರಂದು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಳಿಯ 857 ಕೋಟಿ ರೂ. ಗಳ ಕಾಮಗಾರಿಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದ ಪರಿಣಾಮ ಇಂದು 439 ಕೋಟಿ ರೂ. ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ನಗರ ಆರೋಗ್ಯ ಉಪ ಕೇಂದ್ರ ನರ‍್ಮಾಣ, ದುರಸ್ತಿ, ಅಂಬುಲೆನ್ಸ್ ಸೇವೆ ಒದಗಿಸಲು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ಇದಲ್ಲದೆ 50-50 ಅನುಪಾತ ಅನುದಾನದಡಿ ಅಲ್ಪಸಂಖ್ಯಾತ ಇಲಾಖೆಯ ಸಹಯೋಗದಡಿ 48 ಮೌಲಾನಾ ಅಜಾದ್, ಮೋರರ‍್ಜಿ ದೇಸಾಯಿ ವಸತಿ ಶಾಲೆ ಸ್ಥಾಪನೆ, 34 ಬಿ.ಸಿ.ಎಂ. ಹಾಸ್ಟೆಲ್ ಸ್ಥಾಪನೆ, 186 ಕೋಟಿ ರೂ. ಮೊತ್ತದ ಎಸ್.ಸಿ.-ಎಸ್.ಟಿ ಹಾಸ್ಟೆಲ್ ನರ‍್ಮಿಸಲಾಗುತ್ತಿದೆ. ಕಲ್ಯಾಣ ಪಥ ಯೋಜನೆಯಡಿ ಗ್ರಾಮೀಣ ರಸ್ತೆ ನರ‍್ಮಾಣಕ್ಕೆ 330 ಕೋಟಿ ರೂ. ಮಂಡಳಿ ನೀಡಿದ್ದು, ಶೀಘ್ರವೇ ಸಿ.ಎಂ. ಚಾಲನೆ ನೀಡಲಿದ್ದಾರೆ. ಕಂದಾಯ ಇಲಾಖೆ-ಕೆ.ಕೆಆರ್.ಡಿ.ಬಿ. ಸಹಭಾಗಿತ್ವದಲ್ಲಿ ಪ್ರದೇಶದ ನೂತನ 16 ತಾಲೂಕಿನಲ್ಲಿ ತಲಾ 8.60 ಕೋಟಿ ರೂ. ವೆಚ್ಚದಲ್ಲಿ ಮಿನಿ ವಿಧಾನ ನರ‍್ಮಾಣಕ್ಕೂ ಟೆಂಡರ್ ಕರೆಯಲಾಗಿದ್ದು, ಮುಂದಿನ ದಿನದಲ್ಲಿ ಅಭಿವೃದ್ಧಿ ಚಿತ್ರಣ ಕಾಣಬಹುದಾಗಿದೆ ಎಂದರು.
ಡಾ.ಛಾಯಾ ದೇಗಾಂವಕರ್ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ:
ಕಲ್ಯಾಣ ರ‍್ನಾಟಕ ಭಾಗದಲ್ಲಿ ಸಮಗ್ರ ಶಿಕ್ಷಣ ಅಭಿವೃದ್ಧಿಗೆ ಡಾ.ಛಾಯಾ ದೇಗಾಂವಕರ್ ನೇತೃತ್ವದಲ್ಲಿ 8 ಜನರ ಶಿಕ್ಷಣ ತಜ್ಞರ ಸಮಿತಿಯನ್ನು ರ‍್ಕಾರ ರಚಿಸಿದೆ. ಬೀದರಿನ ಡಾ.ಅಬ್ದುಲ್ ಖದೀರ್ ಮತ್ತು ಮಲ್ಲಿಕರ‍್ಜುನ ಎಂ.ಎಸ್., ಬಳ್ಳಾರಿಯ ಫ್ರಾಂಸಿಸ್ ಬಾಷ್ಯಮ್, ಕಲಬುರಗಿಯ ರುದ್ರೇಶ್ ಎಸ್., ಎನ.ಬಿ.ಪಾಟೀಲ, ಯಶವಂತ ಹರಸೂರ ಹಾಗೂ ಡಾ.ನಾಗಾಬಾಯಿ ಬುಳ್ಳಾ ಅವರು ಸಮಿತಿಯಲ್ಲಿದ್ದು, 2 ರ‍್ಷದಲ್ಲಿ ವರದಿ ನೀಡಲು ನೂತನ ತಜ್ಞರ ಸಮಿತಿಗೆ ಸೂಚಿಸಲಾಗಿದೆ. ತ್ವರಿತ ಬದಲಾವಣೆಗೆ ಅಲ್ಪಾವಧಿ ಮತ್ತು ದರ‍್ಘಾವಧಿಯ ಕರ‍್ಸ್ಗಳನ್ನು ಪರಿಚಯಿಸುವಂತೆ ಸಹ ತಿಳಿಸಿದೆ ಎಂದ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರು, ಮುಂದಿನ ದಿನದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಗಮನರ‍್ಹ ಪ್ರಗತಿ ಕಾಣಲು ಆರೋಗ್ಯ ಸಮಿತಿ ಸಹ ರಚಿಸಲಾಗುವುದು ಎಂದರು.
ಅಕ್ಷರ ಆವಿಷ್ಕಾರ ಮುಂದುವರಿಕೆ:
ಮಂಡಳಿಯಿಂದ ಕಳೆದ 2023-24 ಮತ್ತು 2024-25ನೇ ರ‍್ಷವನ್ನು ಶೈಕ್ಷಣಿಕ ರ‍್ಷವೆಂದು ಘೋಷಿಸಿ ಅಕ್ಷರ ಆವಿಷ್ಕಾರ ಕರ‍್ಯಕ್ರಮದ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿದೆ. ಇದರಿಂದ 6,538 ಶಾಲೆಗಳಿಗೆ ದುರಸ್ತಿ ಭಾಗ್ಯ ಒಲಿದಿದೆ. ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ರಾಜ್ಯದಲ್ಲಿ ಪ್ರಥಮವಾಗಿ ಕ.ಕ. ಭಾಗದಲ್ಲಿ 1,008 ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ತರಗತಿ ಆರಂಭಿಸಲಾಗಿದೆ. ಹೀಗಾಗಿ ಮುಂದಿನ 2025-26 ರ‍್ಷದಲ್ಲಿಯೂ ಸಹ ಅಕ್ಷರ ಆವಿಷ್ಕಾರ ಕರ‍್ಯಕ್ರಮಗಳು ಮುಂದುವರೆಯಲಿವೆ ಎಂದು ಡಾ.ಅಜಯ್ ಸಿಂಗ್ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಂಡಳಿ ಕರ‍್ಯರ‍್ಶಿ ಎಂ.ಸುಂದರೇಶ ಬಾಬು ಇದ್ದರು.