ಕಲಬುರಗಿ, ಜುಲೈ 12: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಪ್ರಕರಣಗಳ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ನಾಳೆಯಿಂದ 6 ದಿನಗಳ ಕಾಲ ಪ್ರಾಯೋಗಿಕವಾಗಿ ಲಾಕಡೌನ್ ಮಾಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶರತ್ ಬಿ. ಅವರು ತಿಳಿಸಿದ್ದಾರೆ.
ಈಗಾಗಲೇ ನಗರದ ಇ.ಎಸ್.ಐ. ಮತ್ತು ಜೀಮ್ಸ್ ಆಸ್ಪತ್ರೆಗಳಲ್ಲಿ ಸಂಪೂರ್ಣವಾಗಿ ಬೆಡ್‌ಗಳು ಭರ್ತಿಯಾಗಿದ್ದು, ಲಾಕ್‌ಡೌನ್ ಮಾಡಿದರೆ ಪರಿಸ್ಥಿತಿ ಸುಧಾರಿಸುವ ಭರವಸೆ ಇದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಕೋವಿಡ್-19 ನಿರ್ವಹಣಾ ಸಮಿತಿಯು ತೆಗೆದುಕೊಂಡ ನಿರ್ಣಯಗಳನ್ನು ಸರಕಾರ ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಸಲಾಗಿದ್ದು, ಲಾಕಡೌನ್‌ಗೆ ಅನುಮತಿ ನೀಡಲು ಕೋರಲಾಗಿದೆ.
ಜಿಲ್ಲೆಯಲ್ಲಿ 240 ಕೋವಿಡ್ ಆಸ್ಪತ್ರೆಗಳೆಂದು ಗುರುತಿಸಲಾಗಿದ್ದು, ಕೆಲವು ಖಾಸಗಿ ಆಸ್ಪತ್ರೆಗಳು ನಮ್ಮಿಂದ ಕೋವಿಡ್ ಪ್ರಕರಣಗಳಿಗಾಗಿ ಬೆಡ್‌ಗಳಿಲ್ಲ ಎಂದು ತಿಳಿಸಿದ್ದು, ಆದರೆ ಆ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರೆ ಸೇವೆಗಳನ್ನಾದರೂ ಕೋವಿಡ್ ಸೋಂಕಿತರಿಗೆ ಒದಗಿಸಲು ಕೋರಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಅನ್‌ಲಾಕ್ 1 ಮತ್ತು 2 ತೆರೆವುಗೊಂಡಾಗಿನಿAದ ಮಾರುಕಟ್ಟೆಗಳಲ್ಲಿ ಸಾರ್ವಜನಿಕರು ಬೇಕಾಬಿಟ್ಟಿಯಾಗಿ ಮುಖಕ್ಕೆ ಮಾಸ್ಕ್ ಧರಿಸದೆ, ಯಾವುದೇ ಮುಂಜಾಗ್ರತೆ ಸೂಚಿಸಿದರೂ ಪಾಲಿಸದ ಹಿನ್ನೆಲೆಯಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ನಿರ್ಧಾರಕ್ಕೆ ಬಂದು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಸರಕಾರಕ್ಕೆ ಸಲ್ಲಸಿದ ಪ್ರಸ್ತಾವನೆಯಲ್ಲಿ ದಿನಾಂಕ 13.07.2020 ರಿಂದ 18.07.2020ರ ವರಗೆ ಕೇವಲ ಕಲಬುರಗಿ ನಗರ ಪ್ರದೇಶಕ್ಕೆ ಅನ್ವಯಿಸುವಂತೆ ಲಾಕಡೌನ್‌ಗೆ ಶಿಫಾರಸ್ಸು ಮಾಡಲಾಗಿದೆ.
ಈ ಕುರಿತಂತೆ ನಾಳೆ ದಿನಾಂಕ 13ರಂದು ಬೆಳಿಗ್ಗೆ ಮುಖ್ಯಮಂತ್ರಿಗಳು ರಾಜ್ಯದ ಹಲವಾರು ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು, ಬಹುಃಷ ಈ ಬಗ್ಗೆ ನಾಳೆ ಸ್ಪಷ್ಟವಾದ ನಿರ್ಧಾರ ಪ್ರಕಟವಾಗಲಿದೆ ಎಂದು ಹೇಳಲಾಗಿದೆ.