ರವಿವಾರ ನಡೆಯಬೇಕಾಗಿದ್ದ ಕೆಪಿಎಸ್ಸಿ ಎಫ್.ಡಿ.ಎ ಪರೀಕ್ಷೆ ಮುಂದೂಡಿಕೆ

0
972

ಕಲಬುರಗಿ, ಜ.23 :ಕರ್ನಾಟಕ ಲೋಕಸೇವಾ ಆಯೋಗವು ನಾಳೆ ( ದಿನಾಂಕ:24-01-2021ರAದು ) ರಾಜ್ಯಾದ್ಯಂತ ನಡೆಸಬೇಕಾಗಿದ್ದ 2019ನೇ ಸಾಲಿನ ಪ್ರಥಮದರ್ಜೆ ಸಹಾಯಕರ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಆಯೋಗದ ಕಾರ್ಯದರ್ಶಿ ಜಿ. ಸತ್ಯವತಿ ಅವರು, ಜ. 24 ರಂದು ಎರಡು ಅಧಿವೇಶನಗಳಲ್ಲಿ ನಡೆಯಬೇಕಾಗಿದ್ದ ಪ್ರಶ್ನೆ ಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈಸೇರಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಅನಿವಾರ್ಯ ಕಾರಣಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸದರಿ
ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕವನ್ನು ಮರುನಿಗದಿಪಡಿಸಿ ಪ್ರಕಟಿಸಲಾಗುವುದೆಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here