ಕೊರೋನಾ ಸೋಂಕಿನಿಂದ ಮೂವರು ನಿಧನ

0
857

ಕಲಬುರಗಿ.ಏ.17:ಕೊರೋನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯಲ್ಲಿ‌ ಮೂವರು ನಿಧನರಾಗಿದ್ದಾರೆ ಎಂದು ಶನಿವಾರದ ಅರೋಗ್ಯ ಬುಲೆಟಿನ್ ತಿಳಿಸಿದೆ.
ತೀವ್ರ ಉಸಿರಾಟದ ತೊಂದರೆ ಹಿನ್ನೆಲೆಯ ಕಲಬುರಗಿಯ ಬಸವೇಶ್ವರ ಕಾಲೋನಿಯ 81 ರ‍್ಷದ ವೃದ್ಧ (ರೋಗಿ ಸಂ.1100915) ಏ.10 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿ ಏ.14ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ‌ ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಲಬುರಗಿ ತಾಲೂಕಿನ ಕಲ್ಲಹಂಗರಗಾ ಗ್ರಾಮದ 65 ರ‍್ಷದ ವೃದ್ಧೆ (ರೋಗಿ ಸಂ.1100948) ಏ.11 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.16 ಕ್ಕೆ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟದ ತೊಂದರೆ ಜೊತೆಗೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಶ್ವಾಸಕೋಶದಿಂದ ಬಳಲುತ್ತಿದ್ದ ಕಲಬುರಗಿ ನಗರದ ಎನ್.ಆರ್.ಕಾಲೋನಿಯ 72 ರ‍್ಷದ ವೃದ್ಧ (ರೋಗಿ ಸಂ.1140164) ಏ.13 ರಂದು ಕೋವಿಡ್ ಅಸ್ಪತ್ರೆಗೆ ದಾಖಲಾಗಿ ಏ.15ಕ್ಕೆ ನಿಧನ ಹೊಂದಿದ್ದಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾ ಸೋಂಕಿನಿಂದ 378 ಜನ ನಿಧನರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here