ಕಲಬುರಗಿ, ಸೆ. 18: ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಕಾರ್ಯದರ್ಶಿ ಐ. ಎಚ್. ಮುಲ್ಲಾ ಅವರು ಇಂದು ನಿಧನರಾಗಿದ್ದಾರೆ.
ಅವರಿಗೆ 79 ವರ್ಷ ವಯಸಾಗಿತ್ತು, ಇಬ್ಬರು ಗಂಡು ಮಕ್ಕಳು, ನಾಲ್ಕು ಜನ ಹೆಣ್ಣು ಮಕ್ಕಳು, ಪತ್ನಿ ಸೇರಿದಂತೆ ಹಲವಾರು ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.
2003ರಲ್ಲಿ ನಿವೃತ್ತಿ ಹೊಂದಿದ ಬಳಿಕ ಅವರು ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದು, ಜೇವರ್ಗಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಸಕ್ರೀಯ ರಾಜಕಾರಣಿಯಾಗಿ, ಕಾರ್ಯಕರ್ತರಾಗಿ ಪಕ್ಷಕ್ಕಾಗಿ ಬಹಳಷ್ಟು ಶ್ರಮಿಸಿದ್ದರು.
ಮೃತರ ಅಂತ್ಯಕ್ರಿಯೆಯು ಶನಿವಾರ ಸಂಜೆ 6 ಗಂಟೆಗೆ ಜೇವರ್ಗಿ ತಾಲೂಕಿನ ಬಳಬಟ್ಟಿ ಗ್ರಾಮದಲ್ಲಿ ನಡೆಯಲಿದೆ.
ಆ ದೇವರು ಅವರ ಆತ್ಮಕ್ಕೆ ಶಾಂತಿ ದೊರಕಿಸಲೇಂದು ಪ್ರಾರ್ಥಿಸೋಣ.