ಕಲಬುರಗಿ:ಡಿ.28: ಬರುವ ಜನೇವರಿ 3 ಹಾಗೂ 4ರಂದು ನಡೆಯಲಿರುವ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನಕ್ಕೆ ಸರ್ವ ನಿಟ್ಟಿನಲ್ಲಿ ಸಹಕಾರ ನೀಡುವುದಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿರುವ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಹೇಳಿದರು.
ಸೋಮವಾರ ಕೆಕೆಆರ್‌ಟಿಸಿ ಕೇಂದ್ರ ಕಛೇರಿಯಲ್ಲಿ ಸಮ್ಮೇಳನದ ಆಮಂತ್ರಣ ಸ್ವೀಕರಿಸಿದ ಅವರು, ಪತ್ರಕರ್ತರ ಸಮ್ಮೇಳನ ನಮ್ಮೆಲ್ಲರ ಹಬ್ಬ. ಉದ್ಘಾಟನೆಗೆ ಸಿಎಂ ಆಗಮಿಸುತ್ತಿದ್ದು, ಇದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವರು ಎಂದರು.
ಸಮ್ಮೇಳನಕ್ಕೆ ಬರುವ ಪ್ರತಿನಿಧಿಗಳಿಗೆ ಹಾಗೂ ಸಮ್ಮೇಳನಕ್ಕೆ ಬರುವವರಿಗೆ ಅನುಕೂಲವಾಗಲು ನಿಗಮದಿಂದ ಬಸ್ ಸೌಕರ್ಯ ಕಲ್ಪಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಸಮ್ಮೇಳನದ ಸಿದ್ದತೆಗಳ ಕುರಿತು ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕ ತೇಲ್ಕೂರ, ಸಮ್ಮೇಳನದ ಸಿದ್ದತೆ ಯಲ್ಲಿ ಯಾವುದೇ ಕೊರತೆಯಾಗಬಾರದು ಎಂದರು.
ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಭವಾನಿಸಿಂಗ್ ಠಾಕೂರ್, ಪ್ರಧಾನ ಕಾಯದರ್ಶಿ ದೇವಿಂದ್ರಪ್ಪ ಆವಂಟಿ, ರಾಜ್ಯ ಸಮಿತಿ ಸದಸ್ಯ ಹಣಮಂತರಾವ ಭೈರಾಮಡಗಿ ಮುಂತಾದವರಿದ್ದರು.