ಪದವಿ ಪರೀಕ್ಷೆ: ಸಾಮೂಹಿಕ ನಕಲಿನಲ್ಲಿ ತೊಡಗಿದ್ದ ಬೀದರನ ಸನ್‌ಸಾಫ್ಟ್ ಕಾಲೇಜಿನ ಪರೀಕ್ಷಾ ಕೇಂದ್ರ ರದ್ದು

0
714

ಕಲಬುರಗಿ, ಮೇ. 25: ಗುಲಬರ್ಗಾ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ನಡೆಯುತ್ತಿದ್ದು, ಬೀದರನ ಸನ್ ಸಾಫ್ಟ್ ಪದವಿ ಮಹಾವಿದ್ಯಾಲಯದಲ್ಲಿ ಕಿರಿಯ ಮೇಲ್ವಿಚಾರಕರು, ಸಿಬ್ಬಂದಿಗಳು ಮತ್ತು ಏಳು ಜನ ವಿದ್ಯಾರ್ಥಿಗಳು ಸೇರಿಕೊಂಡು ಸಾಮೂಹಿಕ ನಕಲು ಮಾಡುತ್ತಿದ್ದ ಹಿನ್ನೆಲೆಯಲ್ಲಿ ತಕ್ಷಣವೇ ಆ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸಲಾಗಿದೆ.
ರದ್ದುಪಡಿಸಲಾದ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಮುಂದಿನ ಪರೀಕ್ಷೆಗಳಿಗಾಗಿ ಬಿವಿಬಿ ಪರೀಕ್ಷಾ ಕೇಂದ್ರಕ್ಕೆ ವರ್ಗಾಯಿಸಲಾಗಿದೆ.
ಅಲ್ಲದೇ ಬೀದರನ ಚಂದ್ರಶೇಖರ ಪದವಿ ಮಹಾವಿದ್ಯಾಲಯಕ್ಕೆ ಕುಲಪತಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಇಬ್ಬರು ವಿದ್ಯಾರ್ಥಿಗಳು ಪುಸ್ತಕವನ್ನು ಇಟ್ಟುಕೊಂಡು ನಕಲು ಮಾಡುತ್ತಿರುವುದನ್ನು ಗಮನಿಸಿ ತಕ್ಷಣವೇ ಅವರರನ್ನು ಎಂ.ಪಿ.ಸಿ. ಮಾಡಲಾಯಿತು ಅಲ್ಲದೇ ಹುಮನಾಬಾದನ ಸರಕಾರಿ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯದಲ್ಲಿ ಬಿ.ಎಸ್ಸಿ ಐದನೇ ಸೆಮಿಸ್ಟರ್ ಭೌತಶಾಸ್ತ ವಿಷಯದ ಒಬ್ಬ ವಿದ್ಯಾರ್ಥಿಯನ್ನು ಕೂಡ ನಕಲು ಮಾಡುತ್ತಿರುವಾಗ ಸಿಕ್ಕಿ ಬಿದ್ದಿದ್ದು, ಅತನನ್ನು ಕೂಡ ಎಂಪಿಸಿ ಮಾಡಲಾಗಿದೆ ಎಂದು ಗುಲಬರ್ಗಾ ವಿವಿಯ

LEAVE A REPLY

Please enter your comment!
Please enter your name here