ಕಲಬುರಗಿ, ಜುಲೈ. 10: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯು ಜುಲೈ 12ರ ವರೆಗೆ ಮುಂದುವರಿಯುವ ಸಾಧ್ಯತೆಗಳ ಕುರಿತು ಹವಾಮಾನ ಇಲಾಖೆ ಹೊರಡಿಸಿದ ಓರೆಂಜ್ ಅಲರ್ಟ ಹಿನ್ನೆಲೆಯಲ್ಲಿ ನಾಳೆಯೂ ಕೂಡ ಜಿಲ್ಲೆಯ ಖಾಸಗಿ ಮತ್ತು ಸರ್ಕಾರಿ ಶಾಲಾ, ಪಿಯು ಕಾಲೇಜುಗಳಿಗೆ ಹಾಗೂ ಅಂಗನವವಾಡಿ ಕೇಂರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಯಶ್ವಂತ ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ.
ಕಳೆದ ಶನಿವಾರವು ಕೂಡ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು ಆದರೆ ಇನ್ನು ಮಳೆ ಕಡೆಮೆಯಾಗುವ ಸಾಧ್ಯತೆಯಿಲ್ಲದ ಹಿನ್ನೆಲೆಯಲ್ಲಿ ನಾಳೆ ಸೋಮವಾಋ 11 ಜುಲೈದಂದು ಖಾಸಗಿ, ಸರಕಾರಿ ಕಾಲೇಜು, ಅಂಗನವಾಡಿ ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರುಗಳಿಗೆ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಈ ರಜಾ ಅವಧಿಯನ್ನು ಮುಂದಿನ ದಿನಗಳಳ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಸಹ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಮಳೆಯ ಅರ್ಭಟ ಹೀಗೆಯೇ ಮುಂದುವರೆದರೆ ಮತ್ತೆ ಮಂಗಳವಾರವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಸಾಧ್ಯತೆಯಿದೆ.