ದೇವಾನಂದ್ ಆತ್ಮಹತ್ಯೆ ಪ್ರಕರಣ: ಸಚಿವ ಖರ್ಗೆ ರಾಜೀನಾಮೆಗೆ ಮ್ಯಾಕೇರಿ ಆಗ್ರಹಶೀಘ್ರ ಕಲಬುರ್ಗಿ ಬಂದ್, ಎಸ್‌ಪಿ ಕಚೇರಿಗೆ ಮುತ್ತಿಗೆ ಹೋರಾಟದ ಬೆದರಿಕೆ

0
918

ಕಲಬುರ್ಗಿ, ಅ.21- ಚಿತ್ತಾಪುರ ತಾಲ್ಲೂಕಿನ ಕಲಗುರ್ತಿ ಗ್ರಾಮದ ದೇವಾನಂದ್ ಕೊರಬಾ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಶೀಘ್ರ ಕಲಬುರ್ಗಿ ಬಂದ್ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಜಿಲ್ಲಾ ಕೋಲಿ ಕಬ್ಬಲಿಗ ಸಮನ್ವಯ ಸಮಿತಿಯ ಮುಖಂಡ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಅವ್ವಣ್ಣ ಮ್ಯಾಕೇರಿ ಅವರು ಎಚ್ಚರಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾನಂದ್ ಆತ್ಮಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅನಿರ್ಧಿಷ್ಟ ಧರಣಿ ಸತ್ಯಾಗ್ರಹವನ್ನು ಆರಂಭಿಸಿ ಈಗ 81 ದಿನಗಳಲ್ಲಿ ಮುಂದುವರೆದಿದೆ. ಆದಾಗ್ಯೂ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅದೇ ಮಾರ್ಗದಲ್ಲಿ ಹೋಗುತ್ತಿದ್ದರೂ ಸಹ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡುತ್ತಿಲ್ಲ. ಇನ್ನು ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲು ಸಹ ಅವಕಾಶ ಕೊಡುತ್ತಿಲ್ಲ. ಆರೋಪಿಗಳನ್ನು ಬಂಧಿಸದೇ, ಹೋರಾಟಗಾರರನ್ನು ಬಂಧಿಸಲಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದುಬಿದ್ದಿದೆ. ಕೂಡಲೇ ಸಚಿವ ಖರ್ಗೆ ಅವರನ್ನು ಸಂಪುಟದಿAದ ಮುಖ್ಯಮಂತ್ರಿಗಳು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ದೇವಾನಂದ್ ಕೊರಬಾ ಸಾವಿಗೆ ಕಾರಣವಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸುವAತೆ, ಮೃತ ಸಂತ್ರಸ್ತ ಕುಟುಂಬಕ್ಕೆ ಒಂದು ಕೋಟಿ ರೂ.ಗಳ ಪರಿಹಾರ ನೀಡುವಂತೆ, ಒಬ್ಬರಿಗೆ ಸರ್ಕಾರಿ ಉದ್ಯೋಗ ಕೊಡುವಂತೆ, ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಹಾಗೂ ಹೋರಾಟಗಾರರ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಬೇಶರತ್ತಾಗಿ ಹಿಂಪಡೆಯುವAತೆ ಅವರು ಒತ್ತಾಯಿಸಿದರು.
ಮೃತ ದೇವಾನಂದ್ ಸಹೋದರ ಕರಣ್‌ಕುಮಾರ್ ಪುನರ್ ದೂರಿನ ಅಡಿ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥ ಪೋಲಿಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದಲ್ಲಿ ಕಲಬುರ್ಗಿ ಬಂದ್ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹೋರಾಟ ರೂಪಿಸಲಾಗುವುದು ಎಂದು ಅವರು ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಡಾ ಮಾಜಿ ಅಧ್ಯಕ್ಷ ಶರಣಪ್ಪ ತಳವಾರ್, ಬಸವರಾಜ್ ಬೂದಿಹಾಳ್, ಬಸವರಾಜ್ ಹರವಾಳ್, ಮೋಹನ್ ಪಾಟೀಲ್, ಸಂತೋಷ್ ತಳವಾರ್, ಅಮೃತ್ ಗುಂಡಲಗೇರಿ, ಸಂತೋಷ್ ತಳವಾರ್, ರಾಮತೀರ್ಥ ಜಮಾದಾರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here