ಬೆಂಗಳೂರು, ಡಿ. 29: ಆಳಂದ ಶಾಸಕ ಬಿ.ಆರ್ ಪಾಟೀಲ್ ಅವರನ್ನು ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಬಿ.ಆರ್. ಪಾಟೀಲ್ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನಮಾನ ಕೂಡ ನೀಡಿ ಹೊರಡಿಸಲಾದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಕಳೆದ ಎರಡು ತಿಂಗಳ ಹಿಂದೆಯಷ್ಟೆ ಕಾಂಗ್ರೆಸ್ ಪಕ್ಷದಲ್ಲಿ ಸಚಿವರಿಂದ ಶಾಸಕರುಗಳಿಗೆ ನಿರ್ಲಕ್ಷಿಸಲಾಗುತ್ತಿದೆ ಎಂದು ಅಸಮಾಧಾನಗೊಂಡ 35 ಶಾಸಕರು ಬಿ.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.
ಅಲ್ಲದೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಪ್ತರಲ್ಲಿ ಶಾಸಕ ಬಿ.ಆರ್. ಪಾಟೀಲ್ ಅವರು ಪ್ರಮುಖರಾಗಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನೀಡಿ, ಉಂಟಾಗಿರುವ ಸಮಸ್ಯೆಗೆ ತಾತ್ಕಾಲಿಕ ಪೂರ್ಣವಿರಾಮ ನೀಡಿದಂತಾಗಿದೆ.